Mysore
24
haze

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಸಿಹಿ ಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಾಳೆಯಿಂದ ಆರಂಭವಾಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ.

ಬೆಂಗಳೂರು ಹಾಗೂ ಮೈಸೂರಿನಿಂದ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದ್ದು, ಬಸ್‌ ನಿಲ್ದಾಣಗಳಿಂದ ಪ್ರತಿ 30 ನಿಮಿಷಕ್ಕೆ ಒಂದರಂತೆ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ.

ಈ ಮೂಲಕ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದ್ದು, ಸಮ್ಮೇಳನಕ್ಕೆ ಸಾವಿರಾರು ಜನರು ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಮಂಡ್ಯ ಜಿಲ್ಲೆಯ ಪ್ರತಿ ತಾಲ್ಲೂಕಿನಿಂದ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗಾಗಿ ತಲಾ 15 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರಿಗೆ ಉಚಿತ ಬಸ್‌ ವ್ಯವಸ್ಥೆ ಮಾಡಲಾಗಿದ್ದು, ಸಮ್ಮೇಳನದಲ್ಲಿ ಮೂರು ಕಡೆ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೆಲ್ಲದರ ಮಧ್ಯೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್‌ ಅವರು, ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರು ಮತ್ತು ಮಂಡ್ಯಕ್ಕೆ ಬಂದು ಹೋಗುವವರಿಗಾಗಿ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

 

Tags: