ಮಂಡ್ಯ

ಜನರ ಆಶಯದಂತೆ ಕುಮಾರಣ್ಣ ಮಂಡ್ಯದಿಂದ ಸ್ಪರ್ಧೆ ಮಾಡ್ತಿದ್ದಾರೆ: ನಿಖಿಲ್‌ ಕುಮಾರಸ್ವಾಮಿ

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿರುವ ಬಗ್ಗೆ ವ್ಯಂಗ್ಯವಾಡಿರುವ ಶ್ರೀರಂಗಪಟ್ಟಣದ ಶಾಸಕ ರಮೇಶ್‌ ವಿರುದ್ಧ ಎಚ್‌ಡಿಕೆ ಮಗ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರಿಗೆ ಆಗಿರುವ ಆಪರೇಷನ್ನು ಇವರಿಗೆ ಪ್ರೂ ಮಾಡುವ ಅಗತ್ಯವಿಲ್ಲ. ಆಪರೇಷನ್ ಆಗಿದೆ ಎಂಬ ಅನುಕಂಪದಲ್ಲಿ ಮತ ಕೇಳುವ ಪ್ರಮೇಯ ನಮಗೆ ಇಲ್ಲ. ನಮ್ಮ ತಂದೆಗೆ ಆಪರೇಷನ್ ಆಗಿರೋದು ನಿಜ. ಮೂರನೇ ಬಾರಿಗೆ ಅವರಿಗೆ ಹೃದಯದ ಶಸ್ತ್ರ ಚಿಕಿತ್ಸೆ ಆಗಿದೆ. ಇದನ್ನು ಸಾಬೀತು ಮಾಡುವ ಅವಶ್ಯಕತೆ ನಮಗೆ ಇಲ್ಲ. ರಮೇಶ್ ಬಂಡಿಸಿದ್ದೇಗೌಡ ಅವರ ಹಿರಿತನಕ್ಕೆ ಈ ಮಾತು ಕ್ಷೋಭೆ ತರಲ್ಲ ಎಂದು ನಿಖಿಲ್‌ ವಾಗ್ದಾಳಿ ನಡೆಸಿದ್ದಾರೆ.

6 ವರ್ಷದಲ್ಲಿ ಇದು ಮೂರನೇ ಬಾರಿ ಹೃದಯದ ಶಸ್ತ್ರಚಿಕಿತ್ಸೆ ನಡೆದಿದೆ. ಅದರ ನೋವು ನಮಗೆ ಮಾತ್ರ ಗೊತ್ತಿದೆ. ನಮ್ಮ ಕುಟುಂಬ ಯಾವತ್ತು ಮೊಸಳೆ ಕಣ್ಣೀರು ಹಾಕಿಲ್ಲ. ಕುಮಾರಣ್ಣ ಓರ್ವ ಭಾವನಾತ್ಮಕ ಜೀವಿ. ಜನರಿಗೆ ಕಷ್ಟಗಳಾದಾಗ ಕುಮಾಣ್ಣನಿಗೆ ಕಣ್ಣೀರು ಬರುತ್ತೆ. ಕುಮಾರಣ್ಣನ ಸ್ಪರ್ಧೆಯನ್ನು ಕಾಂಗ್ರೆಸ್ ಅವರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಹೀಗೆ ಕಾಂಗ್ರೆಸ್ ನಾಯಕರು ಮಾತಾಡುತ್ತಾರೆ ಎಂದು ಕಿಡಿಕಾರಿದರು.

ಅನಿರೀಕ್ಷಿತ ಬೆಳವಣಿಗೆಯಲ್ಲಿ ಕುಮಾರಣ್ಣ ಮಂಡ್ಯ ಅಭ್ಯರ್ಥಿ ಆಗಿದ್ದಾರೆ. ಕಾರ್ಯಕರ್ತರ ಒತ್ತಾಸೆಗೆ ಸೋತು ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಕುಮಾರಣ್ಣ ಸ್ಪರ್ಧೆ ಮಾಡುತ್ತಿದ್ದಾರೆ. ರಾಜ್ಯದ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುವ ಶಕ್ತಿಯನ್ನು ಜನರು ಅವರಿಗೆ ಕೊಟ್ಟಿದ್ದಾರೆ. ಜನರು ಕುಮಾರಣ್ಣನ ಸ್ಪರ್ಧೆ ನಿರ್ಧಾರ ಮಾಡ್ತಾರೆ. ಬೇರೆ ಯಾರು ಅವರ ಸ್ಪರ್ಧೆ ನಿರ್ಣಯ ಮಾಡಲ್ಲ ಎಂದು ಕಿಡಿಕಾರಿದರು.

ಜೆಡಿಎಸ್‌ ಎನ್‌ಡಿಎ ಮೈತ್ರಿಯ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಸುಮಲತಾ ಅವರನ್ನು ಸಹಾ ನಾವು ಬೆಂಬಲ ಕೇಳುತ್ತೇವೆ ಎಂದು ನಿಖಿಲ್‌ ವಿಶ್ವಾಸ ವ್ಯಕ್ತಪಡಿಸಿದರು.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದೇವನೂರಿನಲ್ಲಿ 9 ಎಕರೆ ಒತ್ತುವರಿ ತೆರವು ; ಎಂಡಿಎ ಕಾರ್ಯಾಚರಣೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ…

1 hour ago

ಮಳೆ ಕೊರತೆ, ಬಿಸಿಲಿಗೆ ಕಬಿನಿ ನೀರಿನ ಮಟ್ಟ ಕುಸಿತ

ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ…

2 hours ago

ಇಂದಿನಿಂದ ಮೂರು ದಿನ ಸಿಇಟಿ ಪರೀಕ್ಷೆ

ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 22 ಬುಧವಾರ

2 hours ago

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

14 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

14 hours ago