N Cheluvarayaswamy
ನಾಗಮಂಗಲ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚಿಸಿದ್ದಾರೆ.
ನಾಗಮಂಗಲದ ಬೀರೇಶ್ವರ ಗ್ರಾಮದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು ಇದಕ್ಕಾಗಿ ರೂ.35.75 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ.
ಇದರಲ್ಲಿ 31 ಕೋಟಿ ರೂ ವೆಚ್ಚದಲ್ಲಿ ಕಟ್ಟಡ 1 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, 3 ಕೋಟಿ ವೆಚ್ಚದಲ್ಲಿ ಪೀಠೋಪಕರಣ, 75 ಲಕ್ಷ ರೂ ವೆಚ್ಚದಲ್ಲಿ ಲ್ಯಾಬ್ ಉಪಕರಣಗಳ ಪೂರೈಕೆ ವ್ಯವಸ್ಥೆ ಮಾಡಲಾಗುವುದು.
ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ರೂ. 1125.25 ಕೋಟಿ ವಸತಿ ಶಾಲೆಗಳು ಪ್ರಾರಾಂಭವಾಗಲಿವೆ.
ವೆಚ್ಚದಲ್ಲಿ 6ನೇ ತರಗತಿಯಿಂದ 12ನೇ ತರಗತಿವರೆಗೆ ವಸತಿ ಶಾಲೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿದೆ. ಶಾಲೆಯಲ್ಲಿ ಪ್ರತಿ ತರಗತಿಗೆ ಒಂದರಂತೆ ಏಳು ತರಗತಿ ಕೊಠಡಿಗಳು 5 ಪ್ರಯೋಗಾಲಯಗಳು, ಗ್ರಂಥಾಲಯ ಬಹುಮಹಡಿ ಚಟುವಟಿಕೆ ಕೊಠಡಿ ಹಾಗೂ ಕ್ರೀಡಾ ಸಾಮಗ್ರಿಗಳ ಕೊಠಡಿ, ಕಚೇರಿ ಕೊಠಡಿ, ಸಿಬ್ಬಂದಿ ಕೊಠಡಿ ಸೇರಿದಂತೆ ಹಲವು ಕೊಠಡಿಗಳನ್ನು ನಿರ್ಮಿಸಲಾಗುವುದು. ಇದಲ್ಲದೇ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳು, ಭೋಜನಾಲಯ ಹಾಗೂ ಅಡುಗೆ ಮನೆ ಶಿಕ್ಷಕರಿಗೆ ಪ್ರತ್ಯೇಕ ವಸತಿ ಗೃಹಗಳನ್ನು ನಿರ್ಮಾಣ, ಪ್ರಯೋಗಾಲಯ ಉಪಕರಣಗಳು, ಪೀಠೋಪಕರಣಗಳ ಸಮೇತ ಸಂಪೂರ್ಣ ಮೂಲಭೂತ ಸೌಕರ್ಯ ಒದಗಿಸಲಾಗುವುದು.
ಪ್ರತಿ ಶಾಲೆಯ ಒಟ್ಟು ವಿಸ್ತೀರ್ಣ 7720.56 ಚ.ಮೀ(83073.22 ಚದರ ಅಡಿ) ಹೊಂದಿರಲಿದೆ. ಮಂಡ್ಯ ಹಾಗೂ ನಾಗಮಂಗಲ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದ್ದು ಎಲ್ಲಾ ವಲಯದಲ್ಲೂ ಸರ್ವತೋಮುಖ ಅಭಿವೃದ್ಧಿಯನ್ನು ಮಾಡಲಾಗುತ್ತಿದೆ. ನಮ್ಮದು ಅಭಿವೃದ್ಧಿ ಕೆಲಸ. ವಿರೋಧಿಗಳದ್ದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಏನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…