ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ
ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ ಹಾಗೂ ದಾಖಲೆ ತಿದ್ದಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯೇ ನೇರ ಹೊಣೆಗಾರರಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಕಿಂಗ್‌ಪಿನ್‌ಗಳು ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ. ಆದ್ದರಿಂದ ಹಾಲಿ ನ್ಯಾಯಾಽಶರು ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಶಾಸಕ ಸುರೇಶ್‌ಗೌಡ ಒತ್ತಾಯಿಸಿದರು.
ಸಚಿವ ಎನ್.ಚಲುವರಾಯಸ್ವಾಮಿ ಅವರ ಅನುಮತಿ ಇಲ್ಲದೆ ಒಂದು ಹುಲ್ಲು ಕಡ್ಡಿಯೂ ಅಲುಗಾಡುವುದಿಲ್ಲ. ಅದರಂತೆ ಈ ಪ್ರಕರಣದಲ್ಲೂ ಅವರೇ ನೇರ ಹೊಣೆಗಾರರಾಗಿದ್ದಾರೆ. ಭೂಗಳ್ಳತನದ ಬಗ್ಗೆ ನಾನು ಈ ಹಿಂದೆಯೂ ಧ್ವನಿ ಎತ್ತಿದ್ದೆ. ಆದರೆ, ಇದೀಗ ಲೋಕಾಯುಕ್ತ ದಾಳಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನನ್ನ ತಪ್ಪಿದ್ದರೂ ಕ್ರಮ ಕೈಗೊಳ್ಳಲಿ
ಪ್ರಕರಣದಲ್ಲಿ ನಿಜವಾದ ಕಿಂಗ್‌ಪಿನ್‌ಗಳು ಯಾರೂ ಸಿಕ್ಕಿಲ್ಲ. ಅಕ್ರಮ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಸುತ್ತಿರುವುದು ಹೊಸದಲ್ಲ. 1990 ರಿಂದಲೂ ನಿರಂತರವಾಗಿ ನಡೆಯುತ್ತಿದೆ. ನಾಗಮಂಗಲ ಕ್ಷೇತ್ರದಲ್ಲಿ 4500ಕ್ಕೂ ಹೆಚ್ಚು ಹೆಕ್ಟೇರ್ ಸರ್ಕಾರಿ ಜಮೀನು ಇದೆ. ಆದ್ದರಿಂದ ಈ ಪ್ರಕರಣ ಸಂಪೂರ್ಣವಾಗಿ ತನಿಖೆ ಆಗಬೇಕು. ನನ್ನ ಅವಽಯಲ್ಲಿ ಅಕ್ರಮ ಆಗಿದ್ದರೂ ತನಿಖೆ ನಡೆಸಬೇಕು. ನನ್ನ ತಪ್ಪಿದ್ದರೂ ಕ್ರಮ ಕೈಗೊಳ್ಳಲಿ ಎಂದು ಹೇಳಿದರು.
ಪೊಲೀಸ್ ಇಲಾಖೆಯಿಂದ ನ್ಯಾಯ ಸಿಗಲ್ಲ:
ಪ್ರಕರಣದಲ್ಲಿ ಪೊಲೀಸ್ ಇಲಾಖೆಯಿಂದ ತನಿಖೆ ನಡೆಸಲಾಗುತ್ತಿದೆ. ಆದರೆ, ಕಂದಾಯ ಹಾಗೂ ಪೊಲೀಸ್ ಇಲಾಖೆಗೂ ಯಾವುದೇ ಸಂಬಂಧವಿಲ್ಲ. ಪೊಲೀಸ್ ತನಿಖೆಯಿಂದ ನ್ಯಾಯ ಸಿಗುವ ವಿಶ್ವಾಸ ಇಲ್ಲ. ಅತ್ತ ಲೋಕಾಯುಕ್ತ ಅಧಿಕಾರಿಗಳು ತುಂಬಾ ಆಳಕ್ಕೆ ಹೋಗಿ ತನಿಖೆ ಮಾಡಿದರೂ ಭೂಗಳ್ಳರು ಸಿಗಲ್ಲ. ಆದ್ದರಿಂದ ಹಾಲಿ ನ್ಯಾಯಾಧೀಶರು ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.
ನಕಲಿ ದಾಖಲೆ ಸೃಷ್ಟಿ, ಕಡತ ತಿದ್ದುಪಡಿ ಸೇರಿದಂತೆ ಹಲವಾರು ಅಕ್ರಮವಾಗಿದೆ. ವರ್ಗಾವಣೆಯಾಗಿರುವ ಅಧಿಕಾರಿಗಳನ್ನು ಇಟ್ಟುಕೊಂಡು ಈ ಕೆಲಸ ಮಾಡಲಾಗುತ್ತಿದೆ. ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿದರೆ ಮಾತ್ರ ಪ್ರಕರಣಕ್ಕೆ ನ್ಯಾಯ ಸಿಗಲಿದೆ. ಇಲ್ಲದಿದ್ದರೆ ಪ್ರಕರಣ ಮುಚ್ಚಿ ಹೋಗುವ ಸಾಧ್ಯತೆ ಇದೆ. ಕಾರಣ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಕ್ಷೇತ್ರದಲ್ಲಿ ಒಂದು ಕಡ್ಡಿ ಅಲ್ಲಾಡುತ್ತಿಲ್ಲ ಎಂದು ದೂರಿದರು.
ಸುದ್ದಿಗೋಷ್ಠಿಯಲ್ಲಿ ಜಾ.ದಳ ಜಿಲ್ಲಾಧ್ಯಕ್ಷ ಡಿ.ರಮೇಶ್, ಮುಖಂಡರಾದ ಚನ್ನಪ್ಪ, ಸಂತೋಷ್, ಅಪ್ಪಾಜಿ, ನಾಗೇಶ್, ರಾಜೇಗೌಡ, ಶ್ರೀನಿವಾಸ್ ಹಾಜರಿದ್ದರು.
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…