ಮಂಡ್ಯ

ಮಂಡ್ಯ: ಮಳೆ ಅಬ್ಬರಕ್ಕೆ ಯುವಕ ಬಲಿ

ಮಂಡ್ಯ: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಜೋರು ಮಳೆಯಿಂದಾಗಿ ಕಾರಿನ ಮೇಲೆ ಮರಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ.

ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ ಯುವಕನಾಗಿದ್ದಾನೆ. ಈತನ ತಂದೆ ಅನಾರೋಗ್ಯದಿಂದ ನಗರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂತೆಯೇ ಮಂಗಳವಾರ ಕಾರ್ತಿಕ್ ಜನ್ಮದಿನವಿತ್ತು. ಈ ಹಿನ್ನೆಲೆಯಲ್ಲಿ ತಂದೆಯ ಆರೋಗ್ಯ ವಿಚಾರಿಸಿಕೊಂಡು ಹಾಗೂ ಹೊಸ ಬಟ್ಟೆ ಖರೀದಿಸಲೆಂದು ನಗರಕ್ಕೆ ಆಗಮಿಸಿದ್ದನು.

ತಂದೆಯ ಆರೋಗ್ಯ ವಿಚಾರಿಸಿ ಹೊರಬರುತ್ತಿದ್ದಂತೆ ಜೋರು ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಬೈಕ್ ನಿಲ್ಲಿಸಿ ಸ್ನೇಹಿತನ ಕಾರು ಹತ್ತಿ ಕುಳಿತಿದ್ದನು. ದುರಾದೃಷ್ಟವಶಾತ್ ಬೃಹತ್ ಗಾತ್ರದ ಮರ ಕಾರಿನ ಮೇಲೆ ಬಿದ್ದು ಸ್ಥಳದಲ್ಲಿಯೇ ಕಾರ್ತಿಕ್‌ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಕ್ರೇನ್ ಸಹಾಯದಿಂದ ಮರ ತೆರವು ಮಾಡಿದರು. ಈ ಸಂಬಂಧ ಮಂಡ್ಯ ಪೂರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

16 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

53 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

1 hour ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago