ಮಂಡ್ಯ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎಲ್ಇಡಿ ವಾಹನ ಹಾಗೂ ಬೀದಿ ನಾಟಕದ ಮೂಲಕ ಗ್ಯಾರಂಟಿ ಯೋಜನೆಗಳ ಪ್ರಚಾರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರಿಂದು ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಚಾಲನೆ ನೀಡಿದರು.
ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಬಡ ಜನರು, ಮಧ್ಯಮ ವರ್ಗದ ಜನರ ಆರ್ಥಿಕ ಮಟ್ಟವನ್ನು ಸುಧಾರಿಸಲು ಸಿಎಂ ಹಾಗೂ ಡಿಸಿಎಂ ಅವರು ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದು ರಾಜ್ಯದಲ್ಲಿ ಆರ್ಥಿಕ ಶಕ್ತಿ ತುಂಬಿದ್ದಾರೆ ಎಂದರು.
ಎಲ್ಇಡಿ ವಾಹನವು ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಸಂಚರಿಸಿ ಗ್ರಾಮೀಣ ಭಾಗದ ಜನರಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಿದೆ ಎಂದು ಮಾಹಿತಿ ನೀಡಿದರು.