ಮದ್ದೂರು : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸಮರ್ಥವಾಗಿ ಕಾನೂನು ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನೂತನವಾಗಿ ನವೀಕರಣಗೊಂಡಿರುವ ಶಾಸಕರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾವೇರಿ ನೀರಿನ ವಿಷಯ ಬಹಳ ಹಿಂದಿನ ಕಾಲದ್ದಾಗಿದೆ. ಕಾಂಗ್ರೆಸ್, ಜಾ.ದಳ ಹಾಗೂ ಬಿಜೆಪಿ ಸರ್ಕಾರಗಳು ಕಾವೇರಿ ನೀರಿನ ವಿಷಯವಾಗಿ ಸಮಸ್ಯೆಗಳನ್ನು ಎದುರಿಸಿವೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತುತ ಎದುರಾಗಿರುವ ಕಾವೇರಿ ಸಮಸ್ಯೆ ಬಗ್ಗೆ ಕಾನೂನು ಹೋರಾಟಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಸರ್ವ ಪಕ್ಷದ ಸಭೆ ಮಾಡುವ ಮೂಲಕ ಕಾವೇರಿ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಗಮನಹರಿಸಿದ್ದೇವೆ ಎಂದರು.
ದೀರ್ಘಾವಧಿ ಬೆಳೆಗೂ ಪರಿಹಾರ : ದೀರ್ಘಾವಧಿ ಬೆಳೆಗೂ ಕೂಡ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಚರ್ಚೆ ಮಾಡಿ ನ್ಯಾಯ ಒದಗಿಸಲಾಗುವುದು. ರಾಜ್ಯದಲ್ಲಿ ಬಹುತೇಕ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಮಳೆ ಅಭಾವದಿಂದ ಬರಪೀಡಿತ ಘೋಷಣೆ ಮಾಡಲು ಈಗಾಗಲೇ ಅಧಿಕಾರಿಗಳಿಂದ ಸರ್ವೆ ಮಾಡಿಸಿ ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಬರಪೀಡಿತ ತಾಲ್ಲೂಕು ಹಾಗೂ ಜಿಲ್ಲೆಗಳನ್ನು ಘೋಷಣೆ ಮಾಡಿ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
25 ವರ್ಷಗಳಿಂದ ಜನತೆ ಸಮಸ್ಯೆ ಎದುರಿಸುತ್ತಿದ್ದಾರೆ : ಶಾಸಕ ಕದಲೂರು ಉದಯ್ ಮಾತನಾಡಿ, ಸುಮಾರು 25 ವರ್ಷಗಳಿಂದ ಹಲವಾರು ಸಮಸ್ಯೆಗಳನ್ನು ಕ್ಷೇತ್ರದ ಜನತೆ ಅನುಭವಿಸುತ್ತಿದ್ದಾರೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ತಾಲ್ಲೂಕು ಕಚೇರಿಯಲ್ಲಿ ಅಧಿಕಾರ ಸಿಗುವುದರಿಂದ ರೈತರ ಸಮಸ್ಯೆ ಕಂದಾಯ ಇಲಾಖೆಯಲ್ಲಿ ಹೆಚ್ಚಿನದಾಗಿರುವುದರಿಂದ ತಾಲ್ಲೂಕು ಕಚೇರಿಯಲ್ಲಿ ಕಚೇರಿ ತೆರೆದಿದ್ದೇನೆ ಎಂದರು.
ವಾರದಲ್ಲಿ ಎರಡು ದಿನ ಕಚೇರಿಯಲ್ಲಿ ಕಾರ್ಯನಿರ್ವಹಿಸಲಾಗುವುದು. ಸಾರ್ವಜನಿಕರಿಗೆ, ರೈತರಿಗೆ ಸ್ಥಳದಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಈಗಾಗಲೇ ಬಹುತೇಕ ಎಲ್ಲ ಇಲಾಖೆಗಳಲ್ಲೂ ಹೊಸ ಅಧಿಕಾರಿಗಳು ಬಂದಿದ್ದಾರೆ, ಮುಂದಿನ ದಿನಗಳಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಲಿದೆ ಎಂದು ಹೇಳಿದರು.
ಜನಸಾಮಾನ್ಯರ ಬಳಿ ಲಂಚ ಪಡೆಯದೆ ಅಧಿಕಾರಿಗಳು ಕಾರ್ಯನಿರ್ವಹಿಸಲು ಸೂಚಿಸಿದ್ದೇನೆ ಹಾಗೂ ಕಚೇರಿಗಳನ್ನು ಶುಚಿಯಾಗಿ ಇಟ್ಟುಕೊಳ್ಳುವುದರ ಮೂಲಕ ಉತ್ತಮ ಪರಿಸರವನ್ನು ಕಾಯ್ದುಕೊಳ್ಳಬೇಕಾಗಿದೆ ಎಂದರು.
ತಾಲ್ಲೂಕು ಕಚೇರಿಯ ಮೇಲಂತಸ್ತು ಮಳೆ ನೀರಿನಿಂದ ಸೋರುತ್ತಿದ್ದು, ಅದರ ನವೀಕರಣಕ್ಕೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ಎರಡೂವರೆ ಕೋಟಿ ರೂ.ಗಳ ಅನುದಾನ ನೀಡುವಂತೆ ಕೋರಿದ್ದೇನೆ ಎಂದು ತಿಳಿಸಿದರು.
ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ತಾಲ್ಲೂಕಿನ ಗಡಿಭಾಗ ನಿಡಘಟ್ಟದಿಂದ ಬೈಕ್ ರ‍್ಯಾಲಿಯ ಮೂಲಕ ತಾಲ್ಲೂಕು ಕಚೇರಿವರೆಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹೆದ್ದಾರಿಯಲ್ಲಿ ಮೆರವಣಿಗೆ ಮಾಡುವ ಮೂಲಕ ಕರೆತಂದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಸೋಮನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿ.ಟಿ. ಶಂಕರ್, ತಾ.ಪಂ. ಮಾಜಿ ಸದಸ್ಯರಾದ ಚಲುವರಾಜು, ಕೆ.ಆರ್.ಮಹೇಶ್, ಗ್ರಾಮ ಪಂಚಾಯತಿ ಸದಸ್ಯ ಮಧು, ಜಿಪಂ ಮಾಜಿ ಸದಸ್ಯ ರಾಜೀವ್, ಪುರಸಭಾ ಸದಸ್ಯರಾದ ಸಚಿನ್, ಮನೋಜ್, ಸಿದ್ದು, ಅಜ್ಜಹಳ್ಳಿ ರಾಮಕೃಷ್ಣ ಇತರರಿದ್ದರು.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…