ಮಳವಳ್ಳಿ : ತಾಲ್ಲೂಕಿನ ಬೆಳಕವಾಡಿ ಸಮೀಪದ ಸೂರ್ಕಳ್ಳಿಯಲ್ಲಿ ಚಿರತೆ ದಾಳಿ ನಡೆಸಿ ಚಂದ್ರಮ್ಮ ಎಂಬವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ಮೇಕೆಗಳನ್ನು ಬಲಿ ಪಡೆದಿದೆ.
ಮೇಕೆ ಸಾಕಾಣಿಕೆ ಮಾಡಿಕೊಂಡು ಜೀವನ ಸಾಗಿಸುತಿದ್ದು, ಚಿರತೆ ದಾಳಿಯಿಂದ ಸುಮಾರು ೪೫,೦೦೦ ರೂ. ನಷ್ಟ ಆಗಿದೆ. ಅರಣ್ಯ ಇಲಾಖೆ ಪರಿಹಾರ ನೀಡಬೇಕೆಂದು ಚಂದ್ರಮ್ಮ ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ ಮರಣೋತ್ತರ ಪರೀಕ್ಷೆ ನಡೆಸಿದರು.
ಈ ಭಾಗದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದೆ. ಮೇಕೆ, ಕುರಿ, ಕರು, ನಾಯಿಗಳನ್ನು ಬಲಿ ತೆಗೆದುಕೊಳ್ಳುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾಕು ಪ್ರಾಣಿಗಳನ್ನು ರಕ್ಷಣೆ ಮಾಡಿಕೊಳ್ಳುವುದು ಕಷ್ಟಕರವಾಗಿದೆ. ಇನ್ನಾದರೂ ಅಽಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ಬೋನು ಅಳವಡಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.





