Mysore
17
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಬೋನಿಗೆ ಬಿದ್ದ ಚಿರತೆ : ಗ್ರಾಮಸ್ಥರ ಆತಂಕ ದೂರು

ಕೆ.ಆರ್.ಪೇಟೆ : ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಎರಡು ವರ್ಷದ ಚಿರತೆಯು ಸೆರೆಯಾಗಿದೆ.

ಮಲ್ಲೇನಹಳ್ಳಿ ಗ್ರಾಮದ ಸ.ನಂ.೩೧ರಲ್ಲಿರುವ ರಾಜೇಗೌಡರ ಪುತ್ರ ಮಂಜೇಗೌಡ ಎಂಬವರ ಜಮೀನಿನಲ್ಲಿ ಹಲವು ದಿನಗಳಿಂದ ಚಿರತೆಯು ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ತಾಲ್ಲೂಕು ಅರಣ್ಯ ಇಲಾಖೆಯ ಆರ್‌ಎಫ್‌ಒ ಅನಿತಾ ಅವರ ನೇತೃತ್ವದಲ್ಲಿ ಶುಕ್ರವಾರ ರಾತ್ರಿ ಬೋನು ಇರಿಸಲಾಗಿತ್ತು.

ಶನಿವಾರ ಮುಂಜಾನೆ ಚಿರತೆಯು ಬೋನಿನಲ್ಲಿ ಸೆರೆಯಾಗಿದೆ. ಇದರಿಂದ ಮಲ್ಲೇನಹಳ್ಳಿ, ಕುಂದನಹಳ್ಳಿ, ಬಿ.ಬಿ.ಕಾವಲು, ಬಂಡಿಹೊಳೆ, ಸಾಧುಗೋನಹಳ್ಳಿ ಮತ್ತಿತರ ಗ್ರಾಮಗಳ ರೈತರಲ್ಲಿ ಉಂಟಾಗಿದ್ದ ಆತಂಕ ದೂರವಾಗಿದೆ.

ಇದನ್ನು ಓದಿ: ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ : ಎಂಎಲ್‌ಸಿ ಕೆ. ಶಿವಕುಮಾರ್‌ ಘೋಷಣೆ

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳಾದ ನಂದಕುಮಾರ್, ಪ್ರಶಾಂತ್, ಸಿಬ್ಬಂದಿ ಸಂಜಯ್, ರಂಗಸ್ವಾಮಿ, ಶ್ರೀಧರ್, ಚಿರತೆ ಕ್ರಿಪ್ರ ಕಾರ್ಯಪಡೆ ಸಿಬ್ಬಂದಿ ಅಭಿಲಾಷ್, ನಿರಂಜನ್, ರಾಜೇಶ್, ಕಾರ್ತಿಕ್, ಕುಮಾರ್ ಮತ್ತಿತರರು ಭಾಗವಹಿಸಿದ್ದರು.

ಬೋನಿನಲ್ಲಿ ಸೆರೆಯಾದ ಚಿರತೆಯನ್ನು ಬಂಡೀಪುರ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು ಎಂದು ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ತಿಳಿಸಿದ್ದಾರೆ. ಈ ವೇಳೆ ಮಾತನಾಡಿದ ತಾಲ್ಲೂಕು ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ಅವರು ತಾಲ್ಲೂಕಿನಲ್ಲಿ ಚಿರತೆಗಳು ಎಲ್ಲೇ ಕಾಣಿಸಿಕೊಂಡರೂ ತಕ್ಷಣ ನಮಗೆ ಮಾಹಿತಿ ನೀಡಬೇಕು. ಇಲಾಖೆಯ ವತಿಯಿಂದ ಚಿರತೆಯನ್ನು ಹಿಡಿದು ಅರಣ್ಯಕ್ಕೆ ಬಿಡಲಾಗುವುದು ಎಂದು ತಿಳಿಸಿದರು.

Tags:
error: Content is protected !!