ಕೆ.ಆರ್.ಪೇಟೆ : ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಎರಡು ವರ್ಷದ ಚಿರತೆಯು ಸೆರೆಯಾಗಿದೆ.
ಮಲ್ಲೇನಹಳ್ಳಿ ಗ್ರಾಮದ ಸ.ನಂ.೩೧ರಲ್ಲಿರುವ ರಾಜೇಗೌಡರ ಪುತ್ರ ಮಂಜೇಗೌಡ ಎಂಬವರ ಜಮೀನಿನಲ್ಲಿ ಹಲವು ದಿನಗಳಿಂದ ಚಿರತೆಯು ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ತಾಲ್ಲೂಕು ಅರಣ್ಯ ಇಲಾಖೆಯ ಆರ್‌ಎಫ್‌ಒ ಅನಿತಾ ಅವರ ನೇತೃತ್ವದಲ್ಲಿ ಶುಕ್ರವಾರ ರಾತ್ರಿ ಬೋನು ಇರಿಸಲಾಗಿತ್ತು.
ಶನಿವಾರ ಮುಂಜಾನೆ ಚಿರತೆಯು ಬೋನಿನಲ್ಲಿ ಸೆರೆಯಾಗಿದೆ. ಇದರಿಂದ ಮಲ್ಲೇನಹಳ್ಳಿ, ಕುಂದನಹಳ್ಳಿ, ಬಿ.ಬಿ.ಕಾವಲು, ಬಂಡಿಹೊಳೆ, ಸಾಧುಗೋನಹಳ್ಳಿ ಮತ್ತಿತರ ಗ್ರಾಮಗಳ ರೈತರಲ್ಲಿ ಉಂಟಾಗಿದ್ದ ಆತಂಕ ದೂರವಾಗಿದೆ.
ಇದನ್ನು ಓದಿ: ಟಿಜೆಎಸ್ ಜಾರ್ಜ್ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ : ಎಂಎಲ್‌ಸಿ ಕೆ. ಶಿವಕುಮಾರ್ ಘೋಷಣೆ
ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳಾದ ನಂದಕುಮಾರ್, ಪ್ರಶಾಂತ್, ಸಿಬ್ಬಂದಿ ಸಂಜಯ್, ರಂಗಸ್ವಾಮಿ, ಶ್ರೀಧರ್, ಚಿರತೆ ಕ್ರಿಪ್ರ ಕಾರ್ಯಪಡೆ ಸಿಬ್ಬಂದಿ ಅಭಿಲಾಷ್, ನಿರಂಜನ್, ರಾಜೇಶ್, ಕಾರ್ತಿಕ್, ಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಬೋನಿನಲ್ಲಿ ಸೆರೆಯಾದ ಚಿರತೆಯನ್ನು ಬಂಡೀಪುರ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು ಎಂದು ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ತಿಳಿಸಿದ್ದಾರೆ. ಈ ವೇಳೆ ಮಾತನಾಡಿದ ತಾಲ್ಲೂಕು ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ಅವರು ತಾಲ್ಲೂಕಿನಲ್ಲಿ ಚಿರತೆಗಳು ಎಲ್ಲೇ ಕಾಣಿಸಿಕೊಂಡರೂ ತಕ್ಷಣ ನಮಗೆ ಮಾಹಿತಿ ನೀಡಬೇಕು. ಇಲಾಖೆಯ ವತಿಯಿಂದ ಚಿರತೆಯನ್ನು ಹಿಡಿದು ಅರಣ್ಯಕ್ಕೆ ಬಿಡಲಾಗುವುದು ಎಂದು ತಿಳಿಸಿದರು.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…