ಮಂಡ್ಯ

ಕರು ಕೊಂದು ಮೇಕೆ ಹೊತ್ತೊಯ್ದ ಚಿರತೆ

ಪಾಂಡವಪುರ : ತಾಲ್ಲೂಕಿನ ಹಿರೇಮರಳಿ ಗ್ರಾಮದ ಹೊರವಲಯದ ಆಲೆಮನೆಯ ಬಳಿ ಕಟ್ಟಿಹಾಕಿದ್ದ ಕರುಗಳು ಹಾಗೂ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕರುವನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಗ್ರಾಮದ ರಾಜೇಶ್ ಎಂಬವರಿಗೆ ಸೇರಿದ ಕರುವನ್ನು ಕೊಂದಿದ್ದು, ಮೇಕೆಯನ್ನು ಹೊತ್ತೊಯ್ದಿದೆ. ಇದರಿಂದ ರೈತರ ರಾಜೇಶ್‌ಗೆ ಸಾವಿರಾರು ರೂ. ನಷ್ಟ ಉಂಟಾಗಿದೆ.

ಹಿರೇಮರಳಿ ಗ್ರಾಮದಿಂದ ಚಿಕ್ಕಮರಳಿ ಗ್ರಾಮದ ಕಡೆಗೆ ಹೋಗುವ ರಸ್ತೆಯ ಪಕ್ಕದಲ್ಲಿ ಇರುವಂತಹ ಆಲೆಮನೆಯ ಬಳಿ ರಾಜೇಶ್ ಅವರು ಕರು ಹಾಗೂ ಮೇಕೆಯನ್ನು ಕಟ್ಟುಹಾಕಿದ್ದರು. ಆಲೆಮನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಮಾಲೀಕರು ರೂಂ ಒಳಗಡೆ ಮಲಗಿದ್ದ ಸಂದರ್ಭದಲ್ಲಿ ಭಾನುವಾರ ರಾತ್ರಿ ಚಿರತೆ ದಾಳಿ ನಡೆಸಿ ಕರುಗಳು ಹಾಗೂ ಮೇಕೆಯ ಮೇಲೆ ದಾಳಿ ನಡೆಸಿ ಕರುಗಳನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿದೆ.

ಮಾಲೀಕರು ಸೋಮವಾರ ಬೆಳಿಗ್ಗೆ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಒಂದು ಕರುವನ್ನು ಆಲೆಮನೆಯ ಬಳಿಯೇ ಬಿಸಾಡಿದ್ದು ಮತ್ತೊಂದು ಕರುವನ್ನು ಕಬ್ಬಿನ ಗದ್ದೆಯ ಬಳಿ ಬಿಸಾಡಿ ಹೋಗಿದೆ. ಮೇಕೆಯನ್ನು ಎಳೆದುಕೊಂಡು ಹೋಗಿದ್ದು ಸಾವಿರಾರು ರೂ. ನಷ್ಟ ಉಂಟಾಗಿದೆ.

ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಚಿರತೆ ದಾಳಿಯಲ್ಲಿ ಮೃತಪಟ್ಟ ಕರುಗಳ ಶವಪರೀಕ್ಷೆ ನಡೆಸಿದರು. ಬಳಿಕ ಸರ್ಕಾರದಿಂದ ದೊರೆಯುವ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.

ಸಾರ್ವಜನಿಕರು ಆತಂಕ
ಇತ್ತೀಚಿನ ದಿನಗಳಲ್ಲಿ ಚಿರತೆ ದಾಳಿಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರು, ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಚಿಕ್ಕಮರಳಿ, ಹಿರೇಮರಳಿ, ನುಗ್ಗಹಳ್ಳಿ, ಕನಗನಮರಡಿ, ಕುರಹಟ್ಟಿ ಸುತ್ತಮುತ್ತಲಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಽಕಾರಿಗಳು ಚಿರತೆಗಳ ಸೆರೆಗೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

7 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

7 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

7 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

9 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

9 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

9 hours ago