ಮಂಡ್ಯ

ಕೊಟ್ಟಿಗೆಯಲ್ಲಿದ್ದ ಮೇಕೆ, ಹಸು ಕೊಂದ ಚಿರತೆ

ಪಾಂಡವಪುರ : ತಾಲ್ಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ರೈತರಾದ ಕೃಷ್ಣೇಗೌಡ, ಚಂದ್ರಶೇಖರ್ ಎಂಬವರಿಗೆ ಸೇರಿದ ಕೊಟ್ಟಿಗೆಗೆ ಸೋಮವಾರ ರಾತ್ರಿ ಚಿರತೆ ದಾಳಿ ನಡೆಸಿ ಹಸು, ಕರು ಹಾಗೂ ಎರಡು ಮೇಕೆಗಳನ್ನು ಕೊಂದಿದೆ.

ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಸು ಮತ್ತು ಕರು, ಮೇಕೆಯ ಕುತ್ತಿಗೆ ಭಾಗವನ್ನು ಹಿಡಿದು ಕೊಂದಿದೆ. ಹಸುವಿನ ಕರುವನ್ನು ಕೊಟ್ಟಿಗೆಯಿಂದ ಹೊರಗಡೆ ಎಳೆದುಕೊಂಡು ಹೋಗಿದೆ. ಹಸು, ಕರುಗಳು ಕಿರುಚಾಟವನ್ನು ಕೇಳಿ ಮನೆಯವರು ಹೊರಬರುತ್ತಿದ್ದಂತೆಯೇ ಚಿರತೆ ಸ್ಥಳದಿಂದ ಪರಾರಿಯಾಗಿದೆ. ಘಟನೆಯಿಂದ ರೈತರಾದ ಕೃಷ್ಣೇಗೌಡ ಮತ್ತು ಚಂದ್ರಶೇಖರ್ ಎಂಬವರಿಗೆ ಸಾವಿರಾರು ರೂ.ನಷ್ಟ ಉಂಟಾಗಿದೆ. ಸಂಬಂಧಿಸಿದ ಇಲಾಖೆಯಿಂದ ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಬಳಿಕ ಪಶು ವೈದ್ಯರಿಂದ ಶವಪರೀಕ್ಷೆ ನಡೆಸಿ ಇಲಾಖೆಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.

ಚಿರತೆ ಸೆರೆ ಹಿಡಿಯಲು ಈಗಾಗಲೆ ದೇವೇಗೌಡನಕೊಪ್ಪಲಿನಿಂದ ಹರಳಹಳ್ಳಿಗೆ ಹೋಗುವ ಬೋರೆಯಲ್ಲಿ ಬೋನ್ ಇಡಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿ ಕುಮಾರ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

2 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

2 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

2 hours ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

2 hours ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

2 hours ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

2 hours ago