ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ.
ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ ಗ್ರಾಮದ ರಸ್ತೆಯ ಸಮೀಪ ಮನೆ ನಿರ್ಮಿಸಿಕೊಂಡಿದ್ದು, ಆ ರಸ್ತೆಯಲ್ಲಿ ಸಂಚರಿಸುತ್ತಿರುವ ಚಿರತೆ ದೃಶ್ಯ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರಿಂದ ಗ್ರಾಮಸ್ಥರು ಆತಂಕಕೊಳಗಾಗಿದ್ದಾರೆ.
ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆಹಿಡಿಯಬೇಕು. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಅರಣ್ಯ ಇಲಾಖೆ ಅಽಕಾರಿಗಳೆ ಹೊಣೆಯಾಗಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.




