Mysore
31
few clouds

Social Media

ಭಾನುವಾರ, 22 ಫೆಬ್ರವರಿ 2026
Light
Dark

ಮದ್ದೂರು| ಚಿಕ್ಕದೊಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.

ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಮೇಕೆಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಸ್ಥಳೀಯರನ್ನು ಭಯಭೀತಗೊಳಿಸಿತ್ತು. ಚಿರತೆ ದಾಳಿಯಿಂದ ಕಂಗಾಲಾದ ಜನರು, ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಅಳವಡಿಸಿದ್ದರು. ಬೋನಿಗೆ ಚಿರತೆ ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

 

Tags:
error: Content is protected !!