ಮಂಡ್ಯ: ಪ್ರಕೃತಿಯನ್ನು ಮಾನವ ವಿನಾಶದ ಅಂಚಿಗೆ ತಳ್ಳಿದ್ದಾನೆ ಪರಿಸರದ ಮೇಲೆ ಅತಿಯಾದ ಆಕ್ರಮಣದಿಂದ ಪ್ರಕೃತಿ ವಿಕೋಪ ಉಂಟಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ವಿಷಾದ ವ್ಯಕ್ತಪಡಿಸಿದರು.
ಅವರ ಇಂದು(ಜೂನ್.5) ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ , ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆ, ನಗರಸಭೆ, ರೋಟರಿ ಮಂಡ್ಯ, ಇವರ ವತಿಯಿಂದ ಜಿಲ್ಲಾ ಅಗ್ನಿಶಾಮಕ ದಳ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟಿ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮನ್ನ ನಾವು ರಕ್ಷಣೆ ಮಾಡಿಕೊಳ್ಳುವ ಸಮಯ ದೂರವಿಲ್ಲ, ಹಲವು ವರ್ಷಗಳಿಂದಲೇ ನೀರುಗಲ್ಲುಗಳು ಕರಗಿ ಕಡಲ ತೀರಗಳು ಮುಳುಗುತ್ತವೆ ಎಂಬುದನ್ನು ತಜ್ಞರು ಹೇಳಿದ್ದಾರೆ, ಅದರಂತೆ ಆ ಪ್ರಕ್ರಿಯೆ ಪ್ರಾರಂಭವಾಗಿದೆ. ಹಾಗಾಗಿ ಪ್ರಕೃತಿಯನ್ನು ರಕ್ಷಣೆ ಮಾಡುವುದು ಮುಖ್ಯವಾಗಬೇಕು. ಆ ಮೂಲಕ ಒಂದು ಸಸಿನೆಟ್ಟು ಪೋಷಣೆ ಮಾಡುವ ಮನೋಭಾವ ಹೆಚ್ಚಾಗಲಿ ಎಂದು ಸಲಹೆ ನೀಡಿದರು.
ವಿಶ್ವ ಪರಿಸರ ದಿನದಂದು ಮಾತ್ರ ಪರಿಸರ ಸಂರಕ್ಷಣೆ ಮಾಡದೆ ಪ್ರತಿದಿನವೂ ಕೂಡ ಪರಿಸರ ಸಂರಕ್ಷಿಸುವ ಕೆಲಸ ಆಗಬೇಕು ನಮ್ಮ ಮನೆಯ ಅಂಗಳದಲ್ಲಿ ಗಿಡಗಳನ್ನು ನೆಟ್ಟಿ ಪ್ರಕೃತಿಯನ್ನು ಉಳಿಸೋಣ ಎಂದರು.
ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಅಗ್ನಿಶಾಮಕ ದಳದ ಕಚೇರಿಯ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಮಂಜುಳ ಇಟ್ಟಿ, ದಿಲೀಪ್ ಕುಮಾರ್ ಬಿ ಸಂದೀಪ್ ಸಾಲಿಯಾನ ಕೆ ಲಕ್ಷ್ಮಿ ಯೋಗೇಶ್ವರ ಪೂಜಾ ಶೆಟ್ಟಿ ಎರಡನೇ ಸಿವಿಲ್ ನ್ಯಾಯಾಧೀಶರಾದ ಶಂಕರ ವಜ್ರೇಶ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ ಆನಂದ್ ರೋಟರಿ ಅಧ್ಯಕ್ಷ ಬಿಎಸ್ ಅನುಪಮಾ ಕಾರ್ಯದರ್ಶಿ ರಾಜೇಶ್ ಭಾಗವಹಿಸಿದ್ದರು.