ಮಂಡ್ಯ

ಪ್ರಕೃತಿ ವಿನಾಶ ನಿಲ್ಲಲಿ: ಬಿ.ಜಿ.ರಮಾ

ಮಂಡ್ಯ: ಪ್ರಕೃತಿಯನ್ನು ಮಾನವ ವಿನಾಶದ ಅಂಚಿಗೆ ತಳ್ಳಿದ್ದಾನೆ ಪರಿಸರದ ಮೇಲೆ ಅತಿಯಾದ ಆಕ್ರಮಣದಿಂದ ಪ್ರಕೃತಿ ವಿಕೋಪ ಉಂಟಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ವಿಷಾದ ವ್ಯಕ್ತಪಡಿಸಿದರು.

ಅವರ ಇಂದು(ಜೂನ್.‌5) ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ , ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆ, ನಗರಸಭೆ, ರೋಟರಿ ಮಂಡ್ಯ, ಇವರ ವತಿಯಿಂದ ಜಿಲ್ಲಾ ಅಗ್ನಿಶಾಮಕ ದಳ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟಿ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಮ್ಮನ್ನ ನಾವು ರಕ್ಷಣೆ ಮಾಡಿಕೊಳ್ಳುವ ಸಮಯ ದೂರವಿಲ್ಲ, ಹಲವು ವರ್ಷಗಳಿಂದಲೇ ನೀರುಗಲ್ಲುಗಳು ಕರಗಿ ಕಡಲ ತೀರಗಳು ಮುಳುಗುತ್ತವೆ ಎಂಬುದನ್ನು ತಜ್ಞರು ಹೇಳಿದ್ದಾರೆ, ಅದರಂತೆ ಆ ಪ್ರಕ್ರಿಯೆ ಪ್ರಾರಂಭವಾಗಿದೆ. ಹಾಗಾಗಿ ಪ್ರಕೃತಿಯನ್ನು ರಕ್ಷಣೆ ಮಾಡುವುದು ಮುಖ್ಯವಾಗಬೇಕು. ಆ ಮೂಲಕ ಒಂದು ಸಸಿನೆಟ್ಟು ಪೋಷಣೆ ಮಾಡುವ ಮನೋಭಾವ ಹೆಚ್ಚಾಗಲಿ ಎಂದು ಸಲಹೆ ನೀಡಿದರು.

ವಿಶ್ವ ಪರಿಸರ ದಿನದಂದು ಮಾತ್ರ ಪರಿಸರ ಸಂರಕ್ಷಣೆ ಮಾಡದೆ ಪ್ರತಿದಿನವೂ ಕೂಡ ಪರಿಸರ ಸಂರಕ್ಷಿಸುವ ಕೆಲಸ ಆಗಬೇಕು ನಮ್ಮ ಮನೆಯ ಅಂಗಳದಲ್ಲಿ ಗಿಡಗಳನ್ನು ನೆಟ್ಟಿ ಪ್ರಕೃತಿಯನ್ನು ಉಳಿಸೋಣ ಎಂದರು.

ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಅಗ್ನಿಶಾಮಕ ದಳದ ಕಚೇರಿಯ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದರು.

ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಮಂಜುಳ ಇಟ್ಟಿ, ದಿಲೀಪ್ ಕುಮಾರ್ ಬಿ ಸಂದೀಪ್ ಸಾಲಿಯಾನ ಕೆ ಲಕ್ಷ್ಮಿ ಯೋಗೇಶ್ವರ ಪೂಜಾ ಶೆಟ್ಟಿ ಎರಡನೇ ಸಿವಿಲ್ ನ್ಯಾಯಾಧೀಶರಾದ ಶಂಕರ ವಜ್ರೇಶ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ ಆನಂದ್ ರೋಟರಿ ಅಧ್ಯಕ್ಷ ಬಿಎಸ್ ಅನುಪಮಾ ಕಾರ್ಯದರ್ಶಿ ರಾಜೇಶ್ ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

57 mins ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

1 hour ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

1 hour ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

1 hour ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

1 hour ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

1 hour ago