ಮಂಡ್ಯ: ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ ಬಹಳ ಸಂತೋಷ. ಅವರು ರಾಜಭವನದ ಜೊತೆಗೆ ರಾಷ್ಟ್ರಪತಿ ಭವನ ಚಲೋ ಕೂಡ ಮಾಡಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನೆಗೆ ಕೂಡ ಹೋಗಲಿ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತ್ತಿರುವ ವಿಚಾರ ಇಟ್ಟುಕೊಂಡು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಮಹಾನ್ ಅಪರಾಧ ಮಾಡಿದ್ದಾರೆ ಎನ್ನುತ್ತಿದ್ದಾರೆ. ನಾನೇ ಕೈ ಜೋಡಿಸಿ ಮನವಿ ಮಾಡುತ್ತೇನೆ . ರಾಜ್ಯಪಾಲರ ಅನುಮತಿ ಪಡೆದು ತನಿಖೆ ಮಾಡಲಿ ಎಂದು ಸಚಿವರು ಸವಾಲು ಹಾಕಿದರು.
ನನ್ನ ಬಗ್ಗೆ ಮಾತನಾಡುವ ಅಸಾಮಿಯ ಬಗ್ಗೆ ಚರ್ಚೆ ಮಾಡಲು ಬಹಳಷ್ಟು ವಿಚಾರಗಳು ಇವೆ. ಪಾಪ ನಮ್ಮನ್ನು ಕೆದಕಿದ್ದಾರೆ. ನಿನ್ನೆಯ ದಿನ ಅಸಲಿ ನಕಲಿ ಎಂದು ಹೇಳಿದ್ದಾರೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಸತ್ತರ ಹೆಸರಲ್ಲಿ ಭೂಮಿ ಖರೀದಿ ಮಾಡಿದ್ದಾರೆ. ಡಿ ನೋಟಿಫಿಷನ್ ಮಾಡಿಕೊಂಡು ಜೀವನ ಮಾಡುವವರು ಇವರು. ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಇವರಿಗೆ ಇದೀಯಾ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಮಂತ್ರಿಗಳ ಲೇಟರ್ ಪ್ಯಾಡ್ ನಲ್ಲಿ ಈ ಜನ ಏನೆಲ್ಲಾ ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಎಲ್ಲರಿಗೂ ಇದೆ. ಮೂಡಾ ದಾಖಲೆಗಳಲ್ಲಿ ಸಹಿ ವ್ಯತ್ಯಾಸ ಜನ ಮಾತನಾಡುತ್ತಿದ್ದಾರೆ. ಈ ಹಗರಣದಲ್ಲಿ ಆಗಿರುವ ಬೆಳವಣಿಗೆ ಬಗ್ಗೆ ಟಾರ್ಚ್ ಹಾಕಿ ನೋಡಿದರೂ ಅಷ್ಟೇ, ಹಾಕದೇ ನೋಡಿದರೂ ಅಷ್ಟೇ. ಅದು ಸರ್ಕಾರಿ ಭೂಮಿ. ಸರ್ಕಾರಿ ಭೂಮಿ ಲಪಟಾಯಿಸಿ ಮೂಡಾ ಸೈಟ್ ಪಡೆದಿದ್ದಾರೆ. ಇದಕ್ಕೆ ಉತ್ತರ ಕೊಡಲಿ ಎಂದು ಅವರು ಒತ್ತಾಯ ಮಾಡಿದರು.
ಕಾನೂನು ಪ್ರಕಾರ ಎಷ್ಟು ಸೈಟ್ ಬೇಕಾದರೂ ಪಡೆಯಿರಿ. ಇದಕ್ಕೆ ನಮ್ಮ ವಿರೋಧವಿಲ್ಲ. ಸುಳ್ಳು ದಾಖಲೆ ಸೃಷ್ಟಿ ಮಾಡಿ, ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಇಂಥ ಕೆಲಸ ಮಾಡಿದ್ದಾರೆ. ಸಾಮಾನ್ಯ ರೈತನೊಬ್ಬ ಬಂದು ಜಮೀನು ಖಾತೆ ಮಾಡಲು ಹೇಳಿದರೆ ಮಾಡಿಕೊಡುತ್ತಾರಾ? ಭೂ ಪರಿವರ್ತನೆ ಮಾಡಿದ್ದೀರಿ ಅಲ್ಲವೇ? ಅದು ಯಾರ ಭೂಮಿ?
ಆ ವ್ಯಕ್ತಿ ಸತ್ತು 25 ವರ್ಷವಾಗಿದೆ. ಸತ್ತಿರುವ ವ್ಯಕ್ತಿಯ ಹೆಸರಲ್ಲಿ ಡಿನೋಟಿಫಿಕೇಷನ್ ಮಾಡಿದ್ದೀರಿ. ಸತ್ತಿರುವ ಲಿಂಗನ ಹೆಸರಲ್ಲಿ ಡಿನೋಟಿಫಿಕೇಷನ್ ಮಾಡಿಸಿದ್ದು ಯಾರು? ಎಂದು ಸಚಿವರು ಪ್ರಶ್ನಿಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…