ಮಂಡ್ಯ

ಸಾಹಿತ್ಯ ಸಮ್ಮೇಳನಕ್ಕೆ ಬರುವ ಅತಿಥಿಗಳನ್ನು ಮನೆ ಅತಿಥಿಗಳಾಗಿ ಬರಮಾಡಿಕೊಳ್ಳೊಣ: ಶಾಸಕ ಪಿ ರವಿಕುಮಾರ್

ಮಂಡ್ಯ: ಮುಂಬರುವ ಡಿಸೆಂಬರ್ ೨೦, ೨೧, ಮತ್ತು ೨೨ ರಂದು ಜಿಲ್ಲೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಅತಿಥಿಗಳನ್ನು ಅತಿ ಗಣ್ಯರು,ಗಣ್ಯರು, ಆಹ್ವಾನಿತರು, ನೋಂದಾಯಿತ ಸದಸ್ಯರು ಎಂಬ ನಾಲ್ಕು ವಿಭಾಗಗಳಾಗಿ ವಿಂಗಡಿಸಿ ವಸತಿ ಸೌಲಭ್ಯ ಕಲ್ಪಿಸಿ ಎಂದು  ಶಾಸಕ ಪಿ. ರವಿಕುಮಾರ್ ಸಲಹೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಾಹಿತ್ಯ ಸಮ್ಮೇಳನ ವಸತಿ ಸಮಿತಿ ಸದಸ್ಯರನ್ನುದ್ದೇಶಿಸಿ ಅವರು ಮಾತನಾಡಿದರು.

ಸೆ.೧೫ ರೊಳಗೆ ಸಮ್ಮೇಳನದ ನೋಂದಣಿ ಸಮಿತಿಯೊಂದಿಗೆ ಸಭೆ ನಡೆಸಿ ವಸತಿ ಕಲ್ಪಿಸ ಬಹುದಾದ ಹೋಟೆಲ್‌ಗಳು,ಸಮುದಾಯ ಭವನಗಳು, ಹಾಸ್ಟೆಲ್‌ಗಳು,ರೆಸಾರ್ಟ್ ಪಟ್ಟಿ ತಯಾರಿಸಲಾಗುವುದು. ಈ ಕೆಲಸಕ್ಕಾಗಿ ಪಿಡಿಒ, ಇಓಗಳು ಮತ್ತು ನಗರಸಭೆ ಅಧಿಕಾರಿಗಳು ಮತ್ತು ಸದಸ್ಯರನ್ನು ಬಳಸಿಕೊಳ್ಳಲಾಗುವುದು ಎಂದರು.

ಸಮ್ಮೇಳನಕ್ಕೆ ಬಂದವರನ್ನು ‘ಮನೆ ಅತಿಥಿ’ಯಾಗಿ ಉಳಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಲಾಗುವುದು. ಸಾಮಾಜಿಕ ಜಾಲತಾಣಗಳು ಮತ್ತು ನಗರದಲ್ಲಿ ರ‍್ಯಾಲಿಗಳನ್ನು ನಡೆಸುವ ಮೂಲಕ ಜನತೆಯಲ್ಲಿ ಜಾಗೃತಿ ಮೂಡಿಸಬೇಕು. ಸರ್ಕಾರಿ ಕಚೇರಿಗಳು, ಪೆಟ್ರೋಲ್ ಬಂಕ್ ಮುಂತಾದ ಕಡೆ ಸಮ್ಮೇಳನದ ಲೋಗೋವನ್ನು ಒಳಗೊಂಡ ಫ್ಲೆಕ್ಸ್ಗಳನ್ನು ಶೀಘ್ರವೇ ಅಳವಡಿಸಲಾಗುವುದು. ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಸೂಚಿಸಲಾಗುವುದು ಎಂದರು.

ಶಿಕ್ಷಣ, ಕಂದಾಯ ಇಲಾಖೆ ಮತ್ತು ಉಪ ಸಮಿತಿಯ ಸದಸ್ಯರನ್ನು ಬಳಸಿಕೊಂಡು ಸಾಧಕ ಬಾಧಕಗಳನ್ನು ನೋಡಿಕೊಂಡು ವಸತಿ ಪ್ರದೇಶಗಳನ್ನು ನಿರ್ಧರಿಸಲಾಗುವುದು. ಅದಕ್ಕೂ ಮುನ್ನ ಹೋಟೆಲ್ ಮಾಲೀಕರ, ಸಮುದಾಯ ಭವನಗಳ ಮಾಲೀಕರ ಜೊತೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದರು.

ಸಭೆಯ ಆರಂಭಕ್ಕೂ ಮುನ್ನ ಉಪವಿಭಾಗಾಧಿಕಾರಿ ಶಿವಮೂರ್ತಿ ವಸತಿ ಸಮಿತಿಯ ರೂಪುರೇಷೆಗಳನ್ನು ನೀಡಿ, ಡಿಸೆಂಬರ್ ೧೦ ರೊಳಗೆ ನೋಂದಾಯಿಸಿಕೊಂಡ ಸದಸ್ಯರಿಗೆ ಮಾತ್ರ ವಸತಿ ಕಲ್ಪಿಸಬಹುದು. ಮಂಡ್ಯ,ಮದ್ದೂರು, ಶ್ರೀರಂಗಪಟ್ಟಣ, ಮೈಸೂರು ಮುಂತಾದ ಕಡೆಗಳಲ್ಲಿ ಇರುವ ಹೋಟೆಲ್, ಸಮುದಾಯ ಭವನ, ಹಾಸ್ಟೆಲ್‌ಗಳು, ರೆಸಾರ್ಟ್ಗಳನ್ನು ಗುರುತಿಸಲಾಗುವುದು. ಸಮ್ಮೇಳನಕ್ಕ್ಕೆ ನೋಂದಣಿ ಮಾಡಿಸಿಕೊಂಡ ಸದಸ್ಯರಿಗೆ ವಸತಿ ವ್ಯವಸ್ಥೆ ನೀಡಲು ಆದ್ಯತೆ ನೀಡಲಾಗುವುದು. ಮೂರು ದಿನ ಮುಂಚೆ ವಸತಿಗೆ ನಿಗದಿಪಡಿಸಿದ ಕಟ್ಟಡಗಳನ್ನು ಸಮಿತಿಯ ವಶಕ್ಕೆ ಪಡೆಯಬೇಕು ಎಂದರು.

ಸಮ್ಮೇಳನ ಸಮನ್ವಯ ಸಮಿತಿ ಸಂಚಾಲಕರಾದ ಮೀರಾ ಶಿವಲಿಂಗಯ್ಯ ಮಾತನಾಡಿ ಹಾವೇರಿಯಲ್ಲಿ ನಡೆದ ಸಮ್ಮೇಳನದಲ್ಲಿ ೧೦,೦೦೦ ಜನಕ್ಕೆ ವಸತಿ ಕಲ್ಪಿಸಲಾಗಿತ್ತು. ಅದನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಬೇಕು.ಕಲಾತಂಡಗಳನ್ನು ಸಮುದಾಯ ಭವನಗಳಲ್ಲಿ ಉಳಿಯಲು ಅವಕಾಶ ಮಾಡಿಕೊಡಬಹುದು ಎಂದರು.

ಸಮಿತಿಯ ಸದಸ್ಯ ಟಿ.ಎಸ್.ಸತ್ಯಾನಂದ ಮಾತನಾಡಿ ಅತಿ ಮುಖ್ಯ ಗಣ್ಯರಿಗೆ ಅಮರಾವತಿ ಹೋಟೆಲ್‌ನಲ್ಲಿ ವಸತಿ ಕಲ್ಪಿಸಿ ಉಳಿದವರಿಗೆ ಮೈಸೂರಿನಲ್ಲಿ ಮಾಡಬೇಕಾಗುತ್ತದೆ. ವಸತಿ ವ್ಯವಸ್ಥೆ ಕಲ್ಪಿಸುವ ಕಟ್ಟಡಗಳಿಗೆ ಖ್ಯಾತ ಕವಿಗಳ ಹೆಸರುಗಳನ್ನು ಇಡಬೇಕು. ಪತ್ರಿಕಾ ಪ್ರಕಟಣೆ ನೀಡಿ ಆಸಕ್ತಿಯುಳ್ಳ ಜನರು ‘ಮನೆ ಅತಿಥಿ’ಯಾಗಿ ವಾಸ್ತವ್ಯ ನೀಡಲು ಬಯಸುವವರ ಪಟ್ಟಿ ಮಾಡಬಹುದು. ಇನ್ಫೋಸಿಸ್ ಸಂಸ್ಥೆಯಲ್ಲಿ ೧೦೦೦ ಜನಕ್ಕೆ ವಸತಿ ಕಲ್ಪಿಸಬಹುದು ಎಂಬ ಸಲಹೆ ನೀಡಿದರು.

ಸಮಿತಿ ಸದಸ್ಯ ಅಪೂರ್ವಚಂದು ಈ ಹಿಂದೆ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಚರ್ಚಿತ ವಾದ ವಿಷಯಗಳನ್ನು ಸಭೆಯ ಮುಂದಿಟ್ಟರು. ನೋಡಲ್ ಅಧಿಕಾರಿಗಳು ಮತ್ತು ಮಾಹಿತಿ ಕೇಂದ್ರಗಳನ್ನು ಸಮ್ಮೇಳನಕ್ಕೆ ಬರುವವರಿಗೆ ಮಾರ್ಗದರ್ಶನ ನೀಡಲು ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಂ, ತಹಸಿಲ್ದಾರ್ ಶಿವಕುಮಾರ್ ಬಿರಾದಾರ, ಬೇಲೂರು ಸೋಮಶೇಖರ್, ಕುರುಬರ ಸಂಘದ ಅಧ್ಯಕ್ಷ ಸುರೇಶ್, ಎಚ್.ಕೆ. ರುದ್ರಪ್ಪ,ಸತ್ಯಪ್ಪ, ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಡಾ.ಕೃಷ್ಣೇಗೌಡ ಹುಸ್ಕೂರು, ಹರ್ಷ ವಿ ಪಣ್ಣೆದೊಡ್ಡಿ, ಬಿ.ಎಂ.ಅಪ್ಪಾಜಪ್ಪ, ಹೊಳಲು ಶ್ರೀಧರ್, ಧನಂಜಯ ದರಸಗುಪ್ಪೆ, ಎಲ್.ಕೃಷ್ಣ, ಸುನಿಲ್ ಕುಮಾರ್, ಹನುಮಂತಯ್ಯ,ದೇವರಾಜು ಕೊಪ್ಪ ಮುಂತಾದವರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಗ್ರೆಸ್‌ನವರು ನಕಲಿ ಹೋರಾಟಗಾರರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌…

53 mins ago

ಮೈಸೂರು ಮುಡಾ ಕೇಸ್:‌ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್‌

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…

57 mins ago

ಬಿಜೆಪಿ ಸಂಸದರಿಂದ ನನ್ನ ಮೇಲೆ ಹಲ್ಲೆ ಆಗಿದೆ: ಸ್ಪೀಕರ್‌ಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸಂಸತ್‌ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…

1 hour ago

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಸಿ.ಟಿ.ರವಿ?

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…

2 hours ago

ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲೂ ಪ್ರತಿಭಟನೆ

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…

2 hours ago

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

3 hours ago