ಮಂಡ್ಯ: ಈಗಾಗಲೇ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಸರ್ಕಾರ ತನ್ನ ದುರಾಡಳಿತವನ್ನು ತೋರುತ್ತಿದೆ. ಈ ಬಗ್ಗೆ ಜನ ಪ್ರತಿಭಟಿಸಿ ಎಚ್ಚರಿಗೆ ನೀಡಲಿ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು.
ಅವರು ಇಂದು(ಜೂ.16) ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದ ಕಾಲಬೈರವೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲು ಬೆಲೆ ಏರಿಕೆ ಮಾಡಿರುವುದಾಗಿ ಕಾಂಗ್ರೆಸ್ ಸಚಿವರೇ ಹೇಳಿದ್ದಾರೆ. ಜನರಿಂದಲೇ ಹಣ ವಸೂಲಿ ಮಾಡಿ, ಅವರಿಗೆ ನೀಡಲು ಮುಂದಾಗಿದ್ದಾರೆ. ಇದರ ವಿರುದ್ಧ ಜನ ದಂಗೆ ಏಳಲಿ ಎಂದರು.
ಕಾಲಬೈರವನ ದರ್ಶನ ಮಾಡಿ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ಒಕ್ಕಲಿಗ ಸಮಾಜ ಮತ್ತು ರಾಜ್ಯಕ್ಕೆ ಗೌರವ ತರುವಂತೆ ಕೆಲಸ ಮಾಡಲು ಶಕ್ತಿ ನೀಡುವಂತೆ ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…