ಮಂಡ್ಯ

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಯುವ ಜನತೆಯು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಹೇಳಿದರು.

ಗ್ರಾಮೀಣಾಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು, ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ರವರ ಸಹಭಾಗಿತ್ವದಲ್ಲಿ “ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026” ನಗರದ ವಿಶ್ವವಿದ್ಯಾಲಯದ ಕಲಾ ಭವನದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉದ್ಯೋಗ ಮೇಳ ಸರ್ಕಾರದ ಒಂದು ಕಾರ್ಯಕ್ರಮವಾಗಿದೆ. ಸರ್ಕಾರ ಬಂದ ಮೇಲೆ ವರ್ಷದಲ್ಲಿ ಒಂದು ಬಾರಿ ಉದ್ಯೋಗ ಮೇಳ ಮಾಡಲು ಸಚಿವಾಲಯ ಹಾಗೂ ಜಿಲ್ಲಾಡಳಿತ ಮಾಡಲು ಆದೇಶ ನೀಡಿದೆ ಎಂದು ಹೇಳಿದರು.

ಇಂದು ಉದ್ಯೋಗ ಮೇಳದಲ್ಲಿ 150 ಕಂಪನಿಗಳು ಭಾಗವಹಿಸಿದೆ. ಆನ್ಲೈನ್ ಮೂಲಕ 6,000 ಉದ್ಯೋಗ ಆಕಾಂಕ್ಷಿಗಳು ನೊಂದಣಿ ಯಾಗಿರುವುದು ಖುಷಿ ವಿಚಾರ. ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲೆಯಲ್ಲಿ ವರ್ಷಕ್ಕೆ ಎರಡು ಬಾರಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಮುಂದಿನ ದಿನದಲ್ಲಿ ಆಧುನಿಕ ತಂತ್ರಜ್ಞಾನ (AI) ಮೂಲಕ ಯುವಜನತೆಗೆ ಉದ್ಯೋಗ ಅವಕಾಶಗಳ ಪ್ರಮಾಣ ಕಡಿಮೆಯಾಗಲಿದೆ. ಆದ್ದರಿಂದ ಆತಂಕ ಪಡುವ ಸನ್ನಿವೇಶವಿಲ್ಲ. ತಮ್ಮ ಕೌಶಲ್ಯದ ಮೂಲಕ ಸ್ವಯಂ ಉದ್ಯೋಗ ಪಡೆಯಬಹುದು ಇದರಿಂದ ಆರ್ಥಿಕ ಸಬಲತೆಯ ಜೊತೆಗೆ ಇತರರಿಗೂ ಉದ್ಯೋಗ ನೀಡಬಹುದು ಎಂದು ಯುವಜನತೆಗೆ ಸಲಹೆ ನೀಡಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಲವನ್ನು ಎದುರಿಸುವ ಮಟ್ಟಿಗೆ ತಾಂತ್ರಿಕ ವಾಗಿ ಜ್ಞಾನ ಪಡೆದು ಮುಂದುವರೆಯಬೇಕು. ಮತ್ತು ಜಿಲ್ಲೆಯಲ್ಲಿ ಯುವ ಜನತೆ ಗೋಸ್ಕರ ಯುವ ಉತ್ಸವವನ್ನು ಶೀಘ್ರದಲ್ಲಿ ಮಾಡುತ್ತೇವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಜೊತೆಗೆ ಜಿಲ್ಲೆಯ ಸಾರ್ವಜನಿಕರಾಗಿ ನೂತನವಾಗಿ ಕಾರ್ಯಕ್ರಮವನ್ನು ಮಾಡುವ ನಿಟ್ಟಿನಲ್ಲಿ ಬೂದನೂರು ಉತ್ಸವ ಪ್ರಯುಕ್ತ ಹೆಲಿ ಟೂರಿಸಂ ಹೆಲಿಪ್ಯಾಡ್ ಸವಾರಿ ಪ್ರದರ್ಶನವು ಯಶಸ್ವಿಯಾಗಿದೆ ಎಂದು ಹೇಳಿದರು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಎ.ಬಿ.ರಮೇಶ್ ಬಂಡಿ ಸಿದ್ದೇಗೌಡ ರವರು ಮಾತನಾಡಿ, ಜಿಲ್ಲೆಯಲ್ಲಿ ಕೈಗಾರಿಕೆ ಪ್ರದೇಶಗಳು ಕಡಿಮೆ ಇರುವುದರಿಂದ ಸಣ್ಣ ಪುಟ್ಟ ವ್ಯತ್ಯಾಸವಿದ್ದರೂ ಸಹ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ನೀಡಲು ವ್ಯವಸ್ಥಾಪಕರು ಅವಕಾಶಮಾಡಿಕೊಡಬೇಕು. ಎಲ್ಲರಿಗೂ ಉದ್ಯೋಗ ದೊರೆಯುವಂತಾಗಲಿ ಎಂದು ಶುಭ ಹಾರೈಸಿದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಮಾತನಾಡಿ, ಕೃಷಿ, ಕೈಗಾರಿಕೆ, ಶಿಕ್ಷಣ, ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ದಿಮತ್ತೆ ಹಾಗೂ ಆಧುನಿಕ ತಂತ್ರಜ್ಞಾನ ಕ್ಕೆ ಕಾಲಕಾಲಕ್ಕೆ ಹೊಂದಾಣಿಕೆಯಾಗುತ್ತಿದೆ ಹಾಗೂ ಬದಲಾವಣೆಯಗುತ್ತಿದೆ. ರಾಜ್ಯ ಸರ್ಕಾರ ಪದವಿದರರಿಗೆ ಹಾಗೂ ಡಿಪ್ಲೋಮೋದವರಿಗೆ ಯುವ ನಿಧಿ ಯೋಜನೆಯಲ್ಲಿ ನಿರುದ್ಯೋಗ ಪದವೀಧರರಿಗೆ ಯೋಜನೆಯ ಮೂಲಕ ಇದುವರೆಗೂ ರಾಜ್ಯದಲ್ಲಿ 3,08,672 ವಿದ್ಯಾರ್ಥಿಗಳಿಗೆ 912 ಕೋಟಿ ಹಾಗೂ ಮಂಡ್ಯ ಜಿಲ್ಲೆಯಲ್ಲಿ 7,222 ನಿರುದ್ಯೋಗಿ ಪದವಿದರರಿಗೆ ಯೋಜನೆಯ ಮೂಲಕ 21 ವರೆ ಕೋಟಿ ಹಣವನ್ನು ಅವರ ಖಾತೆಗೆ ನೀಡುವ ಕೆಲಸ ಆಗಿದೆ. ಯುವಜನತೆ ತಮ್ಮ ಕೌಶಲ್ಯತೆಯನ್ನು ಹೆಚ್ಚಿಸಿಕೊಂಡು ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಶಾಸಕರಾದ ಪಿ.ರವಿಕುಮಾರ್ ಗಣಿಗರವರು ಮಾತನಾಡಿ ಸುಮಾರು 150 ಕಂಪನಿ ಉದ್ಯೋಗ ಮೇಳದಲ್ಲಿ ಭಾಗಿಯಾಗಿದೆ. ಮಂಡ್ಯದಲ್ಲಿ ಉದ್ಯೋಗ ಅವಕಾಶ ಕಡಿಮೆ. ನಿರುದ್ಯೋಗವನ್ನು ಹೋಗಲಾಡಿಸಲು ನಮ್ಮ ಸರ್ಕಾರ ಮುಂದಾಗಿದ್ದು ಮಂಡ್ಯದಲ್ಲಿ ಅಮೇರಿಕಾದ ಕಂಪನಿಯೊಂದು ಆರಂಭವಾಗಿ ಸ್ಥಳೀಯರಿಗೆ ಉದ್ಯೋಗ ನೀಡಲು ಮುಂದಾಗಿದೆ ಎಂದರು. ಜಿಲ್ಲೆಯಲ್ಲಿ 6 ತಿಂಗಳಿನಲ್ಲಿ 20 ಸಾವಿರ ಉದ್ಯೋಗ ಅವಕಾಶ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಆರ್.ನಂದಿನಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಈಗಾಗಲೇ ಆನ್ ಲೈನ್ ಮೂಲಕ ನೋಂದಣಿ ಮಾಡಲಾಗಿದೆ. 150ಕ್ಕೂ ಹೆಚ್ಚಿನ ಕಂಪನಿಗಳು ಭಾಗವಹಿಸಿದ್ದು. ಎಸ್ ಎಸ್ ಎಲ್ ಸಿ ಯಿಂದ ಸ್ನಾತಕೋತ್ತರ ಪದವೀಧರು 6000 ಅಭ್ಯರ್ಥಿಗಳು ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಿದ್ದಾರೆ.. ಹೊರ ಜಿಲ್ಲೆಯಲ್ಲಿಂದಲೂ ಕೂಡ ಭಾಗಿಯಾಗಿರುವುದು ವಿಶೇಷ. ವಿಶೇಷ ಚೇತನರಿಗೆ ಕೌಶಲ್ಯ ಉದ್ಯೋಗವನ್ನು ನೀಡಲಾಗುವುದು. ಇಷ್ಟೇ ಅಲ್ಲದೇ ಉದ್ಯೋಗ ದೊರೆಯದ ಅಭ್ಯರ್ಥಿ ಗಳಿಗೆ ಸ್ವ ಉದ್ಯೋಗ ಮಾಡುವ ಸಲುವಾಗಿ ಮಾಹಿತಿಯನ್ನು ಸಹ ನೀಡಲಾಗುತ್ತಿದೆ ಎಂದರು.

ಸಂದರ್ಭದಲ್ಲಿ ಗಣ್ಯರು ವಿವಿಧ ಹುದ್ದೆಗೆ ನೇಮಕಾತಿ ಪಡೆದ ವಿಶೇಷ ಚೇತನರಿಗೆ ನೇಮಕಾತಿ ಪತ್ರ ನೀಡಿ ಅಭಿನಂದಿಸಿದರು.

ವಿಧಾನ ಪರಿಷತ್ ಸದಸ್ಯರು ಅಪ್ಪಾಜಿ ಗೌಡ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ ರಘುನಂದನ್ ಜಿಲ್ಲಾಧಿಕಾರಿ ಡಾ. ಕುಮಾರ, ಪೊಲೀಸ್ ಅಧೀಕ್ಷಕರಾದ ವಿ ಜೆ ಶೋಭಾ ರಾಣಿ, ಮಂಡ್ಯ ವಿಶ್ವವಿದ್ಯಾಲಯ ಕುಲಪತಿಗಳಾದ ಎಂ. ಪಿ. ಕೃಷ್ಣ ಕುಮಾರ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ಎಸ್ ಸುಂದರ್ ರಾಜ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

9 mins ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

1 hour ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

4 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

4 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

4 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

4 hours ago