ಮಂಡ್ಯ

ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲಿ: ಶೇಕ್ ತನ್ವೀರ್ ಆಸೀಫ್

ಮಂಡ್ಯ: ಮಹಿಳೆಯರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಪ್ರಯೋಜನೆ ಪಡೆದು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ಹೇಳಿದರು.

ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮೃದ್ಧಿ ಸಂತೃಪ್ತಿ ಮಹಿಳಾ ಉದ್ಯಮಿಗಳ ಕಾರ್ಯಗಾರದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರಿಗೆ ಉದ್ಯೋಗವನ್ನು ಸೃಷ್ಟಿ ಮಾಡುವ ಹಲವಾರು ಸ್ವ ಉದ್ಯೋಗ ಉಪಕರಣಗಳು – ಸೆಲ್ಕೋ ಸಂಸ್ಥೆಯಲ್ಲಿ ಲಭ್ಯವಿದೆ. ಕೇಂದ್ರ ರಾಜ್ಯ ಸರ್ಕಾರದಲ್ಲಿ ಹಲವಾರು ರೀತಿಯ ಸಹಾಯದನವನ್ನು ನೀಡುವ ಅವಕಾಶಗಳಿವೆ ಇದನ್ನು ಮಹಿಳೆಯರು ಬಳಕೆ ಮಾಡಿಕೊಳ್ಳಬೇಕು. ಮಹಿಳೆಯರು ಸ್ವಾವಲಂಬಿ ಜೀವನ ನಿರ್ವಹಣೆ ಮಾಡಲು ಹಲವಾರು ಅವಕಾಶಗಳಿವೆ ಆದ್ದರಿಂದ ಅವುಗಳ ಸದುಪಯೋಗ ಪಡಿಸಿಕೊಳ್ಳುವುದು ಬಹಳ ಉತ್ತಮ ಎಂದರು.

ಎಷ್ಟೋ ಹೆಣ್ಣುಮಕ್ಕಳು ತಮ್ಮ ಜೀವನವನ್ನು ನಡೆಸಲು ಬಹಳಷ್ಟು ಕಷ್ಟ ಪಡುತ್ತಾರೆ, ಆರ್ಥಿಕವಾಗಿ, ದುರ್ಬಲವಾಗಿ ಹಾಗೂ ಮಾನಸಿಕವಾಗಿ ಕುಗ್ಗಿರುವ ಹೆಣ್ಣು ಮಕ್ಕಳು ಜೀವನದ ಮೇಲೆ ಆಸಕ್ತಿಯನ್ನೆ ಕಳೆದುಕೊಂಡಿರುತ್ತಾರೆ ಅಂತಹ ಹೆಣ್ಣುಮಕ್ಕಳಿಗೆ, ಮಹಿಳೆಯರಿಗೆ ನನ್ನದೊಂದು ಕಿವಿಮಾತು ಜೀವನ ನಡೆಸಲು ಮನೆಯ ಜವಾಬ್ದಾರಿಯನ್ನು ಪುರೈಸಲು ಉನ್ನತವಾದ ಅವಕಾಶಗಳು ಇವೇ ಸೆಲ್ಕೋ ಸಂಸ್ಥೆಯಲ್ಲಿ ಸ್ವ-ಉದ್ಯೋಗಕ್ಕೆಂದು ಉಪಕರಣಗಳ ವ್ಯವಸ್ಥೆ ಲಭ್ಯವಿದೆ ಎಂದು ಹೇಳಿದರು.

ಈ ಕಾರ್ಯಕ್ರಮವನ್ನು ವಿಶೇಷವಾಗಿ ಮಹಿಳೆಯರ ಕಾರ್ಯಗಾರವನ್ನಾಗಿಯೇ ಮಾಡಲಾಗಿದೆ. ಒಬ್ಬ ಮಹಿಳೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧನೆ ಮಾಡಬಹುದು ಆದ್ದರಿಂದ ಕೇಂದ್ರ ರಾಜ್ಯ ಸರ್ಕಾರವು ಇದರ ಬಗ್ಗೆ ಆಲೋಚನೆ ಮಾಡಿ ಮಹಿಳೆಯರಿಗಾಗಿ ಹಲವಾರು ರೀತಿಯ ಸಹಾಯಧನವನ್ನು ಸಹ ಒದಗಿಸಿದೆ ಎಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಸೆಲ್ಕೋ DGM ಗುರುಪ್ರಕಾಶ ಶೆಟ್ಟಿ ಅವರು ಮಾತನಾಡಿ ಸೆಲ್ಕೋ ಸಂಸ್ಥೆಯಲ್ಲಿ ಇರುವ ಉದ್ಯೋಗದ ಉಪಕರಣಗಳ ಕುರಿತು ಮಾಹಿತಿ ನೀಡಿದರು.

ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಲು ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.

ಸೆಲ್ಕೋ ಸಂಸ್ಥೆಯಲ್ಲಿ ಜೀವನ ಆಧಾರಿತ ಸೌರ ಚಾಲಿತ ಉಪಕರಣ ಗಳಾದ ಹಾಲು ಕರೆವ ಯಂತ್ರ, ಕುಲುಮೆ ಯಂತ್ರ, ಬೆಣ್ಣೆ ಕಡೆವ ಯಂತ್ರ, ಹೊಲಿಗೆ ಯಂತ್ರ, ರೊಟ್ಟಿ ತಯಾರಿಕ ಯಂತ್ರ, ಶೀತಿಲಿಕರಣ ಯಂತ್ರ, ಕಬ್ಬಿನಹಾಲು ತೆಗೆವ ಯಂತ್ರ, ತರ್ಕಾರಿ ಕತ್ತರಿಸುವ ಯಂತ್ರ, ಹೀಗೆ ಹೈನುಗಾರಿಕೆ, ಕೃಷಿ, ಆಹಾರ ಸಂಸ್ಕಾರಣ ಘಟಕ, ಜೀವನೋಪಾಯ ಘಟಕ, ಅಂಗವಿಕಲರಿಗೆ ಸಂಬಂದಿಸಿದ ಸೌರ ಉಪಕರಣಗಳು ಇನ್ನು ಹಲವಾರು ಉದ್ಯೋಗ ಸೃಷ್ಟಿ ಮಾಡುವ ಉಪಕರಣ ಗಳು ಇವೇ ಅದರ ಉಪಯೋಗ ಮಾಡಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಒಟ್ಟು 300 ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಂಡ್ಯ ಎನ್.ಆರ್.ಎಲ್.ಎಂ ಯೋಜನಾ ನಿರ್ದೇಶಕರು ಸಂಜೀವಪ್ಪ ಕೆ.ಪಿ, ಜಿಲ್ಲಾ ನಬಾರ್ಡ್ ಅಭಿವೃದ್ಧಿ ವ್ಯವಸ್ಥಾಪಕ ಹರ್ಷಿತಾ ಬಿವಿ, ಜಿಲ್ಲಾ ನಲ್ಮ್ ಕೌಶಲ್ಯ ಅಭಿವೃದ್ಧಿ ಅಧಿಕಾರಿ ನಾಗಾನಂದ ಆರ್, ಜಂಟಿ ಕೃಷಿ ನಿರ್ದೇಶಕ ಅಶೋಕ್. ವಿ.ಎಸ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಚೇರಿ ವವಸ್ಥಾಪಕರು ಸಲೀಮ್ ರಾಜು, DRP ಪಿಎಂಮ್ ಯೋಜನೆ ಅಶ್ವಿನ್ ಕುಮಾರ್ ಹೆಚ್. ವಿ, ಮಂಡ್ಯ ಶಾಖೆ ಸೆಲ್ಕೋ ಮ್ಯಾನೇಜರ್ ಅಭಿಲಾಷ್ ಎಚ್‌ಎನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

23 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

35 mins ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

46 mins ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

1 hour ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

2 hours ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago