ಮಂಡ್ಯ: ಮಹಿಳೆಯರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಪ್ರಯೋಜನೆ ಪಡೆದು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮೃದ್ಧಿ ಸಂತೃಪ್ತಿ ಮಹಿಳಾ ಉದ್ಯಮಿಗಳ ಕಾರ್ಯಗಾರದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರಿಗೆ ಉದ್ಯೋಗವನ್ನು ಸೃಷ್ಟಿ ಮಾಡುವ ಹಲವಾರು ಸ್ವ ಉದ್ಯೋಗ ಉಪಕರಣಗಳು – ಸೆಲ್ಕೋ ಸಂಸ್ಥೆಯಲ್ಲಿ ಲಭ್ಯವಿದೆ. ಕೇಂದ್ರ ರಾಜ್ಯ ಸರ್ಕಾರದಲ್ಲಿ ಹಲವಾರು ರೀತಿಯ ಸಹಾಯದನವನ್ನು ನೀಡುವ ಅವಕಾಶಗಳಿವೆ ಇದನ್ನು ಮಹಿಳೆಯರು ಬಳಕೆ ಮಾಡಿಕೊಳ್ಳಬೇಕು. ಮಹಿಳೆಯರು ಸ್ವಾವಲಂಬಿ ಜೀವನ ನಿರ್ವಹಣೆ ಮಾಡಲು ಹಲವಾರು ಅವಕಾಶಗಳಿವೆ ಆದ್ದರಿಂದ ಅವುಗಳ ಸದುಪಯೋಗ ಪಡಿಸಿಕೊಳ್ಳುವುದು ಬಹಳ ಉತ್ತಮ ಎಂದರು.
ಎಷ್ಟೋ ಹೆಣ್ಣುಮಕ್ಕಳು ತಮ್ಮ ಜೀವನವನ್ನು ನಡೆಸಲು ಬಹಳಷ್ಟು ಕಷ್ಟ ಪಡುತ್ತಾರೆ, ಆರ್ಥಿಕವಾಗಿ, ದುರ್ಬಲವಾಗಿ ಹಾಗೂ ಮಾನಸಿಕವಾಗಿ ಕುಗ್ಗಿರುವ ಹೆಣ್ಣು ಮಕ್ಕಳು ಜೀವನದ ಮೇಲೆ ಆಸಕ್ತಿಯನ್ನೆ ಕಳೆದುಕೊಂಡಿರುತ್ತಾರೆ ಅಂತಹ ಹೆಣ್ಣುಮಕ್ಕಳಿಗೆ, ಮಹಿಳೆಯರಿಗೆ ನನ್ನದೊಂದು ಕಿವಿಮಾತು ಜೀವನ ನಡೆಸಲು ಮನೆಯ ಜವಾಬ್ದಾರಿಯನ್ನು ಪುರೈಸಲು ಉನ್ನತವಾದ ಅವಕಾಶಗಳು ಇವೇ ಸೆಲ್ಕೋ ಸಂಸ್ಥೆಯಲ್ಲಿ ಸ್ವ-ಉದ್ಯೋಗಕ್ಕೆಂದು ಉಪಕರಣಗಳ ವ್ಯವಸ್ಥೆ ಲಭ್ಯವಿದೆ ಎಂದು ಹೇಳಿದರು.
ಈ ಕಾರ್ಯಕ್ರಮವನ್ನು ವಿಶೇಷವಾಗಿ ಮಹಿಳೆಯರ ಕಾರ್ಯಗಾರವನ್ನಾಗಿಯೇ ಮಾಡಲಾಗಿದೆ. ಒಬ್ಬ ಮಹಿಳೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧನೆ ಮಾಡಬಹುದು ಆದ್ದರಿಂದ ಕೇಂದ್ರ ರಾಜ್ಯ ಸರ್ಕಾರವು ಇದರ ಬಗ್ಗೆ ಆಲೋಚನೆ ಮಾಡಿ ಮಹಿಳೆಯರಿಗಾಗಿ ಹಲವಾರು ರೀತಿಯ ಸಹಾಯಧನವನ್ನು ಸಹ ಒದಗಿಸಿದೆ ಎಂದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಸೆಲ್ಕೋ DGM ಗುರುಪ್ರಕಾಶ ಶೆಟ್ಟಿ ಅವರು ಮಾತನಾಡಿ ಸೆಲ್ಕೋ ಸಂಸ್ಥೆಯಲ್ಲಿ ಇರುವ ಉದ್ಯೋಗದ ಉಪಕರಣಗಳ ಕುರಿತು ಮಾಹಿತಿ ನೀಡಿದರು.
ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಲು ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.
ಸೆಲ್ಕೋ ಸಂಸ್ಥೆಯಲ್ಲಿ ಜೀವನ ಆಧಾರಿತ ಸೌರ ಚಾಲಿತ ಉಪಕರಣ ಗಳಾದ ಹಾಲು ಕರೆವ ಯಂತ್ರ, ಕುಲುಮೆ ಯಂತ್ರ, ಬೆಣ್ಣೆ ಕಡೆವ ಯಂತ್ರ, ಹೊಲಿಗೆ ಯಂತ್ರ, ರೊಟ್ಟಿ ತಯಾರಿಕ ಯಂತ್ರ, ಶೀತಿಲಿಕರಣ ಯಂತ್ರ, ಕಬ್ಬಿನಹಾಲು ತೆಗೆವ ಯಂತ್ರ, ತರ್ಕಾರಿ ಕತ್ತರಿಸುವ ಯಂತ್ರ, ಹೀಗೆ ಹೈನುಗಾರಿಕೆ, ಕೃಷಿ, ಆಹಾರ ಸಂಸ್ಕಾರಣ ಘಟಕ, ಜೀವನೋಪಾಯ ಘಟಕ, ಅಂಗವಿಕಲರಿಗೆ ಸಂಬಂದಿಸಿದ ಸೌರ ಉಪಕರಣಗಳು ಇನ್ನು ಹಲವಾರು ಉದ್ಯೋಗ ಸೃಷ್ಟಿ ಮಾಡುವ ಉಪಕರಣ ಗಳು ಇವೇ ಅದರ ಉಪಯೋಗ ಮಾಡಿಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಒಟ್ಟು 300 ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಂಡ್ಯ ಎನ್.ಆರ್.ಎಲ್.ಎಂ ಯೋಜನಾ ನಿರ್ದೇಶಕರು ಸಂಜೀವಪ್ಪ ಕೆ.ಪಿ, ಜಿಲ್ಲಾ ನಬಾರ್ಡ್ ಅಭಿವೃದ್ಧಿ ವ್ಯವಸ್ಥಾಪಕ ಹರ್ಷಿತಾ ಬಿವಿ, ಜಿಲ್ಲಾ ನಲ್ಮ್ ಕೌಶಲ್ಯ ಅಭಿವೃದ್ಧಿ ಅಧಿಕಾರಿ ನಾಗಾನಂದ ಆರ್, ಜಂಟಿ ಕೃಷಿ ನಿರ್ದೇಶಕ ಅಶೋಕ್. ವಿ.ಎಸ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಚೇರಿ ವವಸ್ಥಾಪಕರು ಸಲೀಮ್ ರಾಜು, DRP ಪಿಎಂಮ್ ಯೋಜನೆ ಅಶ್ವಿನ್ ಕುಮಾರ್ ಹೆಚ್. ವಿ, ಮಂಡ್ಯ ಶಾಖೆ ಸೆಲ್ಕೋ ಮ್ಯಾನೇಜರ್ ಅಭಿಲಾಷ್ ಎಚ್‌ಎನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…