ಮಂಡ್ಯ

ಸಾಮರಸ್ಯ ಮತ್ತು ಸಮಾನತೆ ಭಾವನೆಯ ಮೂಲಕ ಮಾದರಿ ಸಮಾಜ ನಿರ್ಮಾಣ ಮಾಡೋಣ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಎಲ್ಲರೂ ಸಾಮರಸ್ಯದಿಂದ ಮತ್ತು ಸಮಾನತೆಯಿಂದ ಬದುಕಬೇಕು ಮತ್ತು ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬಾಳಬೇಕು. ಇದರಿಂದ ಮಾದರಿ ಸಮಾಜ ನಿರ್ಮಾಣ ಮಾಡೋಣ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ರವರು ಹೇಳಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಡ್ಯ ಜಿಲ್ಲಾ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಮೇಲೆ ಉಂಟಾಗುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ ಹಾಗೂ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ವಿಚಾರಗೋಷ್ಠಿ ಮತ್ತು ಕಾರ್ಯಗಾರವನ್ನು ಜಿಲ್ಲಾ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ದೀಪ ಬೆಳಗಿಸಿ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ರವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಾನವಕುಲ ಒಂದೇ, ಜಾತಿ ಎಂಬುದು ಹಳೆಯ ಕಾಲದಿಂದಲೂ ಬಂದಿದೆ. ಇಂದಿಗೂ ನಾವು ದೌರ್ಜನ್ಯ ಹಾಗೂ ಅಸ್ಪೃಶ್ಯತೆ ಬಗ್ಗೆ ಮಾತನಾಡುತ್ತೇವೆ ಎಂದರೆ ಬೇಸರದ ಸಂಗತಿ. ಒಂದೆರಡು ಕಡೆ ದೌರ್ಜನ್ಯ ಪ್ರಕರಣ ಕಂಡುಬರುತ್ತಿದೆ ಅದು ಕೂಡ ತಲೆ ತಗ್ಗಿಸುವ ಕೆಲಸವಾಗಿದೆ ಎಂದು ಹೇಳಿದರು.

ರಾಜ್ಯದಲ್ಲೇ ನಮ್ಮ ಜಿಲ್ಲೆ ದೌರ್ಜನ್ಯ ಮುಕ್ತ ಆಗಬಹುದು. ದೌರ್ಜನ್ಯ ಪ್ರಕರಣದಲ್ಲಿ ಶಿಕ್ಷೆ ಪ್ರಮಾಣ ಕಡಿಮೆಯಾಗಿದ್ದು ರಾಜಿಯಲ್ಲೇ ಕೆಲವು ಪ್ರಕಣಗಳು ಬಗೆಹರಿದಿದೆ. ದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯಗಳ ಕಾಯ್ದೆಯು ಜಾರಿಯಲ್ಲಿರುವುದು ಕೇವಲ (ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ )ಮೂರು ರಾಜ್ಯದಲ್ಲಿ ಮಾತ್ರ. ಅದರಲ್ಲೂ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯು ಅಸ್ತಿತ್ವದಲ್ಲಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಕ್ಕಾಗಿ 40 ರಿಂದ 50 ಕೋಟಿ ಹಣ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅಸ್ಪೃಶ್ಯತೆಯನ್ನು ಮುಕ್ತಗೊಳಿಸಿ ಕಾನೂನು ದುರ್ಬಳಕೆ ಆಗದಂತೆ ಮತ್ತು ಜಿಲ್ಲೆಯಲ್ಲಿ ದೌರ್ಜನ್ಯಗಳು ಆಗದಂತೆ ಅಧಿಕಾರಿಗಳು ಕ್ರಮ ವಹಿಸಿಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣವನ್ನು ತಕ್ಷಣದಲ್ಲಿ ಬಗೆಹರಿಸುವ ಸಲುವಾಗಿ ಹಾಗೂ ವಿಲೇವಾರಿ ಮಾಡಲು ನಮ್ಮ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ವರ್ಷದಲ್ಲಿ 50ರಿಂದ 60 ದೌರ್ಜನ್ಯ ಪ್ರಕರಣ ದಾಖಲಾಗುತ್ತಿದೆ. ಕಳೆದ 10 ವರ್ಷದಲ್ಲಿ 850 ಪ್ರಕರಣ ದಾಖಲಾಗಿದ್ದು 12 ಕೋಟಿ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

ಇದುವರೆಗೂ 37 ಪ್ರಕರಣ ಅಂತಿಮ ತೀರ್ಪು ಪಡೆದಿದ್ದು ಶೇ. 5 ರಷ್ಟು ಪ್ರಮಾಣದಲ್ಲಿ ಶಿಕ್ಷೆಯಾಗಿದೆ. ದೌರ್ಜನ್ಯವನ್ನು ತಡೆಗಟ್ಟುವಾ ನಿಟ್ಟಿನಲ್ಲಿ ರಾಜ್ಯದಲ್ಲಿ 33 ಪ್ರತ್ಯೇಕವಾಗಿ ಪೊಲೀಸ್ ಠಾಣೆಯನ್ನು ತೆರೆದಿದೆ. ಇದರಿಂದ ತ್ವರಿತವಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಲವು ಸಭೆಯನ್ನು ಮಾಡಲಾಗಿದೆ ಎಂದು ಹೇಳಿದರು.

ಬಾಬಾ ಸಾಹೇಬ್ ಅಂಬೇಡ್ಕರ್. ಬಾಬು ಜಗಜೀವನ್ ರಾಮ್ ಸಮಾನತೆಯ ಸಂದೇಶವನ್ನು ಸಾರಿದ ಇಬ್ಬರು ಆದರ್ಶನೀಯರ ಗುಣವನ್ನು ಮೈಗೂಡಿಸಿಕೊಂಡು ಹೋಗಬೇಕು. ಮಾನವೀಯತೆ,ಅಂತಕರಣ, ವೈಜ್ಞಾನಿಕ ಮನೋಭಾವ ದಿಂದ ಅಸ್ಪೃಶ್ಯತೆಯನ್ನು ಹೋಗಲಾಡಿಸಬಹುದು ಸಂವಿಧಾನದ ಮಹತ್ವವನ್ನು ಅರಿತು ನಡೆಯಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ. ಆರ್. ನಂದಿನಿ ಸಂವಿಧಾನ ಪೀಠಿಕೆ ಭೋಧನೆ ಮಾಡಿದರು.

ವೇದಿಕೆಯಲ್ಲಿ ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ. ರವಿಕುಮಾರ್, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಸತ್ಯಕೀರ್ತಿ ಮಹಾಸ್ವಾಮೀಜಿ, ಚಿತ್ರದುರ್ಗದ ಶ್ರೀ ಶಿವಶರಣ ಮಾದರಚನ್ನಯ್ಯ ಸ್ವಾಮೀಜಿ, ಕೋಡ್ನ ಶ್ರೀ ಉರಿಲಿಂಗ ಪೆದ್ದಿಶ್ವರ ಮಹಾಸಂಸ್ಥಾನ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದರು.

ಪರಿಶಿಷ್ಟ ಜಾತಿ ಪ.ವರ್ಗಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ್, ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮೂಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್ ಹಾಗೂ ಸಮಾಜಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್ ಕೆ ಗಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago