Mysore
22
overcast clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.

ಲೈನ್‌ಮ್ಯಾನ್‌ ವಿಶ್ವ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.

ವಿದ್ಯುತ್‌ ಕಂಬಕ್ಕೆ ಹತ್ತಿ ದುರಸ್ತಿ ಕಾರ್ಯ ಮಾಡುವಾಗಲೇ ವಿದ್ಯುತ್‌ ಪ್ರವಹಿಸಿ ಕಂಬದ ಮೇಲೆಯೇ ಅಸು ನೀಗಿದ್ದಾರೆ.

ಅರೆಕೆರೆ ಪೊಲೀಸ್‌ ಠಾಣೆಲ್ಲಿ ಪ್ರಕರಣ ದಾಖಲಾಗಿದ್ದು, ಲೈನ್‌ಮ್ಯಾನ್‌ ಕಂಬದ ಮೇಲೆ ಕೆಲಸ ಮಾಡುತ್ತಿರುವಾಗಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತೇ ಅಥವಾ ಲೈನ್‌ ಕ್ಲಿಯರೆನ್ಸ್‌ ಪಡೆಯುವಲ್ಲಿ ಏನಾದರೂ ಲೋಪವಾಗಿದಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

Tags:
error: Content is protected !!