ಮಂಡ್ಯ

ಸಾಹಿತ್ಯ ಸಮ್ಮೇಳನ | ಬೈಕ್‌ ಜಾಥ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಬೈಕ್‌ ಜಾಥಾಗೆ ಜಿಲ್ಲಾಧಿಕಾರಿ ಡಾ.ಕುಮಾರ ಚಾಲನೆ ನೀಡಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಬೈಕ್‌ ಜಾಥವು ನಗರದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಬೆಂಗಳೂರು – ಮೈಸೂರು ಹೆದ್ದಾರಿ ಮಾರ್ಗವಾಗಿ ಕಲ್ಲಹಳ್ಳಿಯ ಎಪಿಎಂಸಿ ಮಾರುಕಟ್ಟೆ, ವಿವಿ ನಗರ, ಅನ್ನಪೂರ್ಣೇಶ್ವರಿ ನಗರ, ಕಾರಸವಾಡಿ ರಸ್ತೆಯ ಅರಳಿಮರ ಸರ್ಕಲ್ ಮುಖಾಂತರ ಕಾಲುವೆ ರಸ್ತೆಯಲ್ಲಿ ಸಾಗಿ ಹೊಸಹಳ್ಳಿಯ ಶ್ರೀ ವೆಂಕಟೇಶ್ವರ ದೇವಸ್ಥಾನ, ಬಿಸಿಲು ಮಾರಮ್ಮನ ದೇವಸ್ಥಾನ ಹೊಸಹಳ್ಳಿ ವೃತ್ತ, 100 ಅಡಿ ರಸ್ತೆಯಲ್ಲಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬಳಿಯಿಂದ ಸುಭಾಷ್ ನಗರದ ವಿನೋಬ ರಸ್ತೆ, ಸಂಜಯ ಸರ್ಕಲ್, ಆರ್‌ಪಿ ರಸ್ತೆಯ ಮೂಲಕ ಕರ್ನಾಟಕ ಬಾರ್ ಸರ್ಕಲ್, ಜಾಥಾ ನೂರಡಿ ರಸ್ತೆಯಲ್ಲಿ ಸಂಚರಿಸಿ ವಿವಿ ರಸ್ತೆಯ ಮೂಲಕ ಮಹಾವೀರ ವೃತ್ತ, ಸಿಮೆಂಟ್ ಡಬಲ್ ರೋಡ್, ಬೆಸಗರಹಳ್ಳಿ ರಾಮಣ್ಣ ವೃತ್ತ, ಆಸ್ಪತ್ರೆ ರಸ್ತೆ, ನಂದಾ ವೃತ್ತ, ಫ್ಯಾಕ್ಟರಿ ಸರ್ಕಲ್, ಗುತ್ತಲು ರಸ್ತೆ, ಸ್ವರ್ಣಸಂದ್ರ ಶನೇಶ್ವರ ದೇವಸ್ಥಾನದ ಮೂಲಕ ಮತ್ತೆ ಫ್ಯಾಕ್ಟರಿ ವೃತ್ತ, ದಾಟಿ ಕಾಳಮ್ಮನ ದೇವಸ್ಥಾನ ಕಾರೆಮನೆ ಗೇಟ್, ಹೊಳಲು ವೃತ್ತದ ಮೂಲಕ ಸಂಚರಿಸಿ ರೈತ ಸಭಾಂಗಣ ತಲುಪಿತು.

ಬೈಕ್‌ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ, ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯಲಿದೆ. ಪ್ರಚಾರದ ಭಾಗವಾಗಿ ಬೈಕ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕನ್ನಡಿಗ ಮನಸ್ಸುಗಳು ಒಂದಾಗಿ ಸೇರಿ ಜೊತೆಗೂಡಿ ಸಾಹಿತ್ಯದ ಹಬ್ಬವನ್ನು ಆಚರಿಸಬೇಕು. ಮಂಡ್ಯ ಜನತೆಯು ಸಹಕಾರದಿಂದ ಕೈಜೋಡಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಜಿಲ್ಲಾ ಕಸಾಪ ಸಮ್ಮೇಳನ ಸಂಚಾಲಕಿ ಮೀರಾ ಶಿವಲಿಂಗಯ್ಯ ಮಾತನಾಡಿ, ಕನ್ನಡ ಪ್ರಜ್ಞೆ, ಕನ್ನಡ ಪ್ರೇಮ ಪ್ರತಿಯೊಬ್ಬರಲ್ಲಿಯೂ ಜಾಗೃತವಾಗಿ ಎಲ್ಲರೂ ಸಮ್ಮೇಳನದಲ್ಲಿ ಭಾಗವಹಿಸಬೇಕು. ಮಂಡ್ಯ ಜನತೆಗೆ ಜಾಗೃತಿ ಮೂಡಿಸಲು ಮೋಟಾರ್ ಬೈಕ್ ಜಾಥಾವನ್ನು ಆಯೋಜಿಸಲಾಗಿದೆ. ಎಲ್ಲರೂ ಸೇರಿ ಜಾಥಾವನ್ನು ಯಶಸ್ವಿಗೊಳಿಸಿ ಎಂದರು.

ಇದೇ ಸಂದರ್ಭದಲ್ಲಿ ಕಸಾಪ ನಗರ ಘಟಕದ ಅಧ್ಯಕ್ಷೆ ಸುಜಾತ ಕೃಷ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಗೌರವ ಕಾರ್ಯದರ್ಶಿ ಹುಸ್ಕೂರು ಕೃಷ್ಣೆಗೌಡ, ಕೋಶಾಧ್ಯಕ್ಷ ಅಪ್ಪಾಜಪ್ಪ, ತಾಲ್ಲೂಕು ಅಧ್ಯಕ್ಷ ಚಂದ್ರಲಿಂಗು, ಪದಾಧಿಕಾರಿಗಳಾದ ರತ್ನಾಶ್ರೀ, ವಿಜಯಲಕ್ಷ್ಮಿ, ಲತಾ, ಪ್ರೊ ಎಂ ಎ ಪ್ರಮೀಳಾ, ಪುಷ್ಪ ಲತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago