ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿ.20,21 ಮತ್ತು 22ರಂದು ಜಿಲ್ಲೆಯಲ್ಲಿ ನಡೆಯಲಿದ್ದು, ಈ ಸಂಬಂಧ ಸಮ್ಮೇಳನ ನಡೆಯುವ ಸ್ಥಳವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಪರಿಶೀಲಿಸಿದರು.
ಜಿಲ್ಲೆಗೆ ಸಾಹಿತ್ಯ ಸಮ್ಮೇಳನ ಒದಗಿ ಬಂದಿರುವುದು ಸಂತೋಷದ ವಿಷಯ. ಆದರೆ ಸಮ್ಮೇಳನ ನಡೆಯುವ ಸ್ಥಳಕ್ಕಾಗಿ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲೆಯ ಪ್ರಗತಿಪರರ ನಡೆವೆಯೇ ಸ್ಥಳದ ಬಗ್ಗೆಗೊಂದವಿತ್ತು. ಹೀಗಾಗಿ ಗುರುವಾರ(ನ.14)ಜಿಲ್ಲಾ ಮಂತ್ರಿ ಎನ್.ಚಲುವರಾಯಸ್ವಾಮಿ ಜಿಲ್ಲೆಯ ಸ್ಯಾಂಜೋ ಆಸ್ಪತ್ರೆ ಹಿಂಭಾಗವೇ ಸಮ್ಮೇಳನ ನಡೆಯಲಿದೆ ಎಂದು ಸ್ಪಷ್ಟನೆ ನೀಡಿದ್ದರು.
ಈ ಹಿನ್ನಲೆ ಇಂದು ಜಿಲ್ಲಾಧಿಕಾರಿ ಡಾ: ಕುಮಾರ ಸಾಹಿತ್ಯ ಸಮ್ಮೇಳನ ನಡೆಯುವ ಸ್ಥಳ ಪರಿಶೀಲಿನೆ ನಡೆಸಿದ್ದಾರೆ.