ಮಂಡ್ಯ

ಸಾಹಿತ್ಯ ಸಮ್ಮೇಳನ| ಮನೆ ಮನೆಗಳಲ್ಲಿ ಕನ್ನಡ ಬಾವುಟ ಹಾರಾಡಲಿ; ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯ ಎಲ್ಲಾ ಮನೆ ಮನೆಗಳ ಮೇಲೂ ಕನ್ನಡ ಬಾವುಟ ಹಾರಿಸುವ ಮೂಲಕ ಜಿಲ್ಲೆಯ ಜನತೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸ್ವಾಗತಿಸುವುದರ ಜೊತೆಗೆ ಸಮ್ಮೇಳನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ಕರೆ ನೀಡಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಹಿತ್ಯ ಸಮ್ಮೇಳನದ ನಗರ ಅಲಂಕಾರ ಸಮಿತಿ ವತಿಯಿಂದ ಸ್ವರ್ಣಸಂದ್ರದಲ್ಲಿ ಆಯೋಜಿಸಿದ್ದ ಮನೆ ಮನೆಗಳಲ್ಲಿ ಕನ್ನಡ ಬಾವುಟ  ಕಾರ್ಯಕ್ರಮಕ್ಕೆ ಬಾವುಟ ಹಾರಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.

ಮನೆಮನೆಗಳ ಮೇಲೆ ಕನ್ನಡ ಬಾವುಟ ಕಟ್ಟುವ ಕಾರ್ಯಕ್ರಮ ಕೇವಲ ಮಂಡ್ಯ ನಗರಕ್ಕೆ ಸೀಮಿತವಾಗದೇ ಜಿಲ್ಲೆಯ ಎಲ್ಲರ ಮನೆಮನೆಗಳ ಮೇಲೂ ಕನ್ನಡ ಬಾವುಟ ಹಾರಾಡಬೇಕು. ತಾಲೂಕು ಕೇಂದ್ರ, ಗ್ರಾಮ ಪಂಚಾಯತಿ ಕಚೇರಿಗಳ ಮೇಲೂ ಕನ್ನಡ ಬಾವುಟ ಹಾರಿಸಿ ಕನ್ನಡದ ಹಬ್ಬವನ್ನು ಮನೆಯ ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ಹೇಳಿದರು.

ಸಾಹಿತ್ಯ ಸಮ್ಮೇಳನದ ಅಂಗವಾಗಿ ಡಿ.15 ರಂದು ಕನ್ನಡಕ್ಕಾಗಿ ಓಟ ಎಂಬ ಘೋಷವಾಕ್ಯದಡಿ ಹಮ್ಮಿಕೊಂಡಿರುವ ಮ್ಯಾರಥಾನ್ ನಲ್ಲಿ ನಗರದ ಪ್ರತಿ ಮನೆಯಿಂದ ಕನಿಷ್ಠ ಒಬ್ಬ ಸದಸ್ಯರಾದರೂ ಪಾಲ್ಗೊಳ್ಳಬೇಕು ಎಂದರು.

ಶಾಸಕ ರವಿಕುಮಾರ್ ಮಾತನಾಡಿ, ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ನೆರವೇರುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿ ಪ್ರಜೆ ಭಾಗವಹಿಸಬೇಕು. ಇನ್ನೊಂದು ವಾರದಲ್ಲಿ ನಗರದ ಎಲ್ಲಾ ಮನೆಗಳ ಮೇಲೆ ಕನ್ನಡ ಬಾವುಟ ಹಾರಾಡಲಿದೆ ಎಂದು ಹೇಳಿದರು.

ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಮಾತನಾಡಿ, ಎಲ್ಲರ ಮನೆ ಮೇಲೆ ಕನ್ನಡ ಬಾವುಟ ಹಾರಿದಾಗ ಮನೆಮನದಲ್ಲಿ ಕನ್ನಡ ಕಂಪು ಮೂಡಲಿದೆ. ಬಾವುಟ ಹಾರಟ ನಮ್ಮ ಏಕತೆ, ಐಕ್ಯತೆ ಅಸ್ಮಿತೆಯ ಸಂಕೇತ. ಇದು ಕನ್ನಡದ ಹಿರಿಮೆ. ಕನ್ನಡದ ಅಭಿಮಾನದ ಕುರುಹು ಎಂದರು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ರಮೇಶ್ ಬಾಬು ಬಂಡೀಸಿದ್ದೇಗೌಡರು, ದಿನೇಶ್ ಗೂಳಿಗೌಡರು,ಕಸಾಪ ಅಧ್ಯಕ್ಷರಾದ ನಾಡೋಜ ಮಹೇಶ್ ಜೋಶಿ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಆಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಓ ಶೇಖ್ ತನ್ವೀರ್ ಆಸೀಫ್, ನಗರಸಭಾ ಅಧ್ಯಕ್ಷರಾದ ಪ್ರಕಾಶ್, ಮುಢಾ ಅಧ್ಯಕ್ಷರಾದ ನಹೀಮ್, ಕಸಾಪ ಜಿಲ್ಲಾ ಸಂಚಾಲಕರಾದ ಮೀರಾ ಶಿವಲಿಂಗಯ್ಯ ಸೇರಿದಂತೆ ನಗರಸಭಾ ಸದಸ್ಯರು, ಕನ್ನಡಪರ ಸಂಘಟನೆಗಳ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

3 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

3 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

3 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

3 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

3 hours ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

3 hours ago