ಬೆಳಗಾವಿ: ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಗುರುವಾರ ಆಹ್ವಾನ ನೀಡಿದರು.
ಬೆಳಗಾವಿಯ ಸುವರ್ಣಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದರು. ಈ ವೇಳೆ ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನಪರಿಷತ್ ಸದಸ್ಯ ಮಧು ಮಾದೇಗೌಡ, ಕನ್ನಡ ಸಾಹಿತ್ಯ ಷರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಇತರ ಗಣ್ಯರು ಹಾಜರಿದ್ದರು.
ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.





