ಮಂಡ್ಯ: ಎಂ.ಕೆ.ದೊಡ್ಡಿಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್‌ಐ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಚನ್ನಪಟ್ಟಣದ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿತ್ತು.
ಕಳ್ಳತನ ಕೇಸ್‌ನಲ್ಲಿ ಬಂಧಿತನಾಗಿದ್ದ ಆರೋಪಿ ರಮೇಶ್ ಠಾಣೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದನು. ಪ್ರಕರಣ ಸಂಬಂಧ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಎಎಸ್‌ಐ ನಾಗರಾಜು, ಕಾನ್‌ಸ್ಟೇಬಲ್‌ಗಳಾದ ಲಕ್ಷ್ಮೀನಾರಾಯಣ, ಪ್ರತಾಪ್, ಸೋಮನಾಥ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.





