ಮಂಡ್ಯ: ಕರ್ನಾಟಕ ಲೋಕಸಭಾ ಚುನಾವಣೆ – 2024 ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಕ್ಷಿಪ್ರ ಸಂಚಾರಿದಳ (FST) ಮತ್ತು ಸ್ಥಾಯಿ ಕಣ್ಗಾವಲು ತಂಡ(SST), ಪೊಲೀಸ್ ತಂಡದವರು ತಪಾಸಣೆ ನಡೆಸಿದ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಹಣವನ್ನು ಆಯಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ/ತಾಲ್ಲೂಕು ಉಪಖಜಾನೆಯ ವಶದಲ್ಲಿರಿಸಲಾಗಿತ್ತು. ಈ ಹಣವು ರಾಜಕೀಯ ಉದ್ದೇಶಕ್ಕಾಗಿ ಬಳಕೆಯಾಗದೆ ಇರುವ ಬಗ್ಗೆ ಸಂಬಂಧಿಸಿದವರಿಂದ ದಾಖಲಾತಿಗಳನ್ನು ಪಡೆದು ಪರಿಶೀಲಿಸಿ ಖಾತ್ರಿಪಡಿಸಿಕೊಂಡ ನಂತರ ಸಂಬಂಧಿಸಿದ ವ್ಯಕ್ತಿಗಳಿಗೆ ಹಣವನ್ನು ಬಿಡುಗಡೆಗೊಳಿಸಲಾಗಿದೆ.
ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಣ ಬಿಡುಗಡೆ ಸಮಿತಿ ಸಭೆ ನಡೆಸಲಾಯಿತು. ಇಂದು ನಡೆದ ಸಭೆಯಲ್ಲಿ ಚುನಾವಣೆಯ ಸಂದರ್ಭದಲ್ಲಿ ಪ್ರಕರಣವೊಂದರಲ್ಲಿ ರೂ 70,000/- ಜಪ್ತಿ ಮಾಡಲಾಗಿತ್ತು, ಸದರಿ ಪ್ರಕರಣದಲ್ಲಿ ಸೂಕ್ತ ದಾಖಲಾತಿ ಹಾಜರುಪಡಿಸಿದ ಹಿನ್ನಲೆ ಹಣ ಬಿಡುಗಡೆಗೊಳಿಸಲು ಸಮಿತಿ ತೀರ್ಮಾನಿಸಿತು.
ಇದರೊಂದಿಗೆ ಹಣ ಬಿಡುಗಡೆ ಸಮಿತಿಯ ಮುಂದೆ ಇದ್ದ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಸಿ.ಇ.ಒ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಚಂದ್ರಶೇಖರ್, ಜಿಲ್ಲಾ ಖಜಾನೆ ಉಪನಿರ್ದೇಶಕ ಸಿದ್ದಲಿಂಗಸ್ವಾಮಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…