ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು/ಸಿಬ್ಬಂದಿಗಳಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು ಮಂಡ್ಯ ವಿಶ್ವವಿದ್ಯಾಲಯದಲ್ಲಿ ಅಂಚೆ ಮತದಾನದ ವ್ಯವಸ್ಥೆ ಮಾಡಲಾಗಿದೆ.
ಅನ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿ, ಮಂಡ್ಯ ಜಿಲ್ಲಾ ಲೋಕಸಭಾ ವ್ಯಾಪ್ತಿಯಲ್ಲಿ ಚುನಾವಣೆ ಕಾರ್ಯನಿರ್ವಹಿಸುತ್ತಿರುವವರಿಗೆ ಪೋಸ್ಟಲ್ ಬ್ಯಾಲೆಟ್ ಮತದಾನದ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 3520 ಅಧಿಕಾರಿಗಳು/ ಸಿಬ್ಬಂದಿಗಳಿಗೆ ಏಪ್ರಿಲ್ 20, 21 ಹಾಗೂ 22 ರಂದು ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಬಾರಿ ಅಧಿಕಾರಿ/ ಸಿಬ್ಬಂದಿಗಳಿಗೆ ಅಂಚೆ ಮೂಲಕ ಯಾವುದೇ ಪೋಸ್ಟಲ್ ಬ್ಯಾಲೆಟ್ ಕಳುಹಿಸಿಕೊಡುವ ವ್ಯವಸ್ಥೆ ಇರುವುದಿಲ್ಲ. ಎಲ್ಲರೂ ಅಂಚೆ ಮತದಾನ ಕೇಂದ್ರದಲ್ಲೇ ಮತದಾನ ಮಾಡಬೇಕಿರುತ್ತದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಾದ ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಇಂದು ಅಂಚೆ ಮತದಾನ ಕೇಂದ್ರದಲ್ಲಿ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿ ಮತವು ಅಮೂಲ್ಯವಾಗಿದೆ, ಯಾವುದೇ ಮತದಾರರು ಮತದಾನದಿಂದ ವಂಚಿತರಾಗಬಾರದು ಎಂದು ಅಧಿಕಾರಿ/ ಸಿಬ್ಬಂದಿಗಳಿಗೆ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗಿದೆ. ತಪ್ಪದೇ ಮತದಾನ ಮಾಡಿ ಎಂದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ ಹಾಗೂ ಮಂಡ್ಯ ಉಪವಿಭಾಗಾಧಿಕಾರಿ ಮಹೇಶ್ ಮತದಾನ ಮಾಡಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…