ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದಯಾನಂದ್ ಎಂಬುವವರು ಪ್ರಭಾರ ಪಿಡಿಒ ಕಾರ್ಯನಿರ್ವಹಿಸಿದ್ದು, ಇ-ಖಾತೆ ಮಾಡಿಸಿಕೊಳ್ಳಲು ಬಂದಿದ್ದ ಅಶ್ವಥ್ ಎಂಬುವವರ ಹತ್ತಿರ 25 ಸಾವಿರ ರೂ. ಹಣವನ್ನು ನೀಡುವಂತೆ ಲಂಚಕ್ಕೆ ಬೇಡಿಕೆಯನ್ನಿಟ್ಟಿದ್ದರು. ಆದರೆ ಇದೀಗ ದಯಾನಂದ್ ಅವರು 12 ಸಾವಿರ ರೂ.ಗಳನ್ನು ಪಡೆಯುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಇನ್ನೂ ಮಂಡ್ಯ ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಪ್ರಭಾರ ಪಿಡಿಒ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





