ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸತೀಶ್ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಮಂಡ್ಯದ ಬಂದಿಗೌಡ ಬಡಾವಣೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ.
ಜೊತೆಗೆ ಕಚೇರಿ ಸೇರಿದಂತೆ ಒಟ್ಟು ನಾಲ್ಕು ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





