ಮಂಡ್ಯ

Loksabha Election Results 2024: ಮಂಡ್ಯ ಫಲಿತಾಂಶದ ಬಗ್ಗೆ ಚಲುವರಾಯಸ್ವಾಮಿಯ ಮೊದಲ ಪ್ರತಿಕ್ರಿಯೆ

ಮಂಡ್ಯ: ಲೋಕಸಭೆ ಚುನಾವಣೆಯ ಫಳಿತಾಂಶ ಇಂದು(ಜೂನ್‌ ೪) ಪ್ರಕಟವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಗೆದ್ದಿದ್ದು, ಕಾಂಗ್ರೆಸ್‌ ಹೀನಾಯ ಸೋಲು ಕಂಡಿದೆ.  ಈ ಬಗ್ಗೆ ಮಂಡ್ಯ  ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವರು,  ಮಂಡ್ಯ ಜಿಲ್ಲೆಯಲ್ಲಿ ನಾವು ಸೋಲು ಗೆಲುವುಗಳನ್ನು ನೋಡಿದ್ದೇವೆ . ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪಿಗೆ ತಲೆಬಾಗುತ್ತೇವೆ‌‌‌‌‌ ಎಂದು ತಿಳಿಸಿದ್ದಾರೆ.

ಹಿಂದೆ ಜೆ.ಡಿ.ಎಸ್ ನ ಎಂಟೂ ಜನರನ್ನು ಗೆಲಿಸಿಕೊಟ್ಟು ನಂತರ ಐದು ವರ್ಷ ನಿರಾಸೆ ಹೊಂದಿದ್ದ ಜನ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಏಳು ಶಾಸಕರನ್ನು ಗೆಲ್ಲಿಸಿದ್ದಾರೆ.
ಒಂದು ವರ್ಷ ನಾವೂ ಅವರ ಸೇವೆಯನ್ನು ಮಾಡಿದ್ದೇವೆ. ನಮ್ಮ ಪಕ್ಷ, ನಮ್ಮ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಕೊಟ್ಟರೂ, ಈ ಲೋಕಸಭಾ ಚುನಾವಣೆಯಲ್ಲಿ ತೀರ್ಪನ್ನು ನಮ್ಮ ವಿರುದ್ಧ ಕೊಟ್ಟಿದ್ದಾರೆ ಜಿಲ್ಲೆಯಲ್ಲಿ ಜನರ ತೀರ್ಪಿಗೆ ತಲೆಬಾಗುತ್ತೇವೆ ಎಂದಿದ್ದಾರೆ.

ಅವರು ಏನು ಭರವಸೆ ಕೊಟ್ಟಿದ್ದಾರೆ ರಾಷ್ಟ್ರಮಟ್ಟದಿಂದ ನಾವು ಏನೇನೋ ಭರವಸೆಗಳನ್ನ ತರುತ್ತೇವೆ ಎಂದು ಹೇಳಿದ್ದಾರೆ ನಾವು ಸಂತೋಷವಾಗಿ ಅವು ಈಡೇರಿಸೋದನ್ನ ಕಾದುನೋಡುತ್ತೇವೆ..
ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಾಧ್ಯಮ ಸಮೀಕ್ಷೆ ಸುಳ್ಳಾಗಿದೆ

ರಾಜ್ಯದ ಜನರು ನೀಡಿದ ತೀರ್ಪು ಸ್ವಾಗತಿಸುತ್ತೇವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ ಒಂದು‌ ಸ್ಥಾನ ಗೆದ್ದಿತ್ತು .ಇದೀಗ 9 ಸ್ಥಾನ ಜಯಿಸಿದ್ದೇವೆ. ಇದು ಕಾಂಗ್ರೇಸ್ ಪಕ್ಷವನ್ನು ಜನ ಕಳೆದ ಬಾರಿಗಿಂತ ಹೆಚ್ಚು ಮೆಚ್ಚಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಕೃಷಿ ಸಚಿವರು ಅಭಿಪ್ರಾಯ ‌ಪಟ್ಟಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಒಕ್ಕೂಟ ಉತ್ತಮ ಸಾಧನೆ ಮಾಡಿದೆ . ಮಾಧ್ಯಮಗಳ ಸಮೀಕ್ಷೆ ಸುಳ್ಳಾಗಿದೆ . ಜನರಿಗೆ ಕಾಂಗ್ರೇಸ್ ನೇತೃತ್ವದ ಮೈತ್ರಿ ಒಕ್ಕೂಟದ ಬಗ್ಗೆ ಒಲವು ಹೆಚ್ಚುತ್ತಿದೆ ಮುಂದೊಂದು ದಿನ ಕೇಂದ್ರದಲ್ಲೂ ಕಾಂಗ್ರೆಸ್ ನೇತೃತ್ವದ ಸರ್ಕಾರ ಬರಲಿದೆ  ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಲ್ಲಿ ಡ್ರಗ್ಸ್‌ ಪತ್ತೆ | ಸರ್ಕಾರ, ಪೊಲೀಸ್‌ ಮತ್ತೇ ವಿಫಲ ; ಯದುವೀರ್‌ ಅಸಮಾಧಾನ

ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…

2 mins ago

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪ್ರಮಾಣ ವಚನ

ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…

22 mins ago

ದಂಟಳ್ಳಿ ಯೋಜನೆಗೆ ಡಿ.ಪಿ.ಆರ್ʼಗೆ ಒತ್ತಾಯಸಿ ಬೃಹತ್‌ ಪ್ರತಿಭಟನೆ

ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…

32 mins ago

ಮೈಸೂರಲ್ಲಿ ಮತ್ತೊಂದು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : ಎನ್‌ಸಿಬಿ ಅಧಿಕೃತ ಮಾಹಿತಿ

ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…

50 mins ago

ಸ್ವತಃ ಎದೆಗೆ ಗುಂಡಿಟ್ಟುಕೊಂಡ ಸಿ.ಜೆ.ರಾಯ್ :‌ ಮರಣೋತ್ತರ ಪರೀಕ್ಷೆಯಲ್ಲಿ ಧೃಢ

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…

2 hours ago

ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…

2 hours ago