ಮಂಡ್ಯ

ಮಂಡ್ಯ: ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ ಕಾಂಗ್ರೆಸ್‌ ಗೆಲುವು ಅಷ್ಟೇ ಸತ್ಯ: ಸಿದ್ದರಾಮಯ್ಯ

ಮಂಡ್ಯ: ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ನಡೆದ ಅಭೂತಪೂರ್ವ ಪ್ರಜಾಧ್ವನಿ-2 ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದ ಅವರು ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಶಾಸಕರು. ಅವರು ಅಲ್ಲೇ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಬಹುದಿತ್ತು. ಆದರೆ ಸೋಲಿನ ಭಯದಿಂದ ಇಲ್ಲಿಗೆ ಬಂದು ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇಲ್ಲೂ ಖಚಿತವಾಗಿ ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ. ಹೀಗಾಗಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಸ್ಪಷ್ಟವಾಗಿ ನುಡಿದರು.

ನರೇಂದ್ರ ಮೋದಿಯವರ ಅಚ್ಚೆ ದಿನ್ 10 ವರ್ಷ ಕಳೆದರೂ ಭಾರತೀಯರಿಗೆ ಬಂದಿಲ್ಲ. ರಾಜ್ಯದ ಜನತೆಗೆ ಅಚ್ಚೆ ದಿನ್ ಕಾಣಿಸಿಯೇ ಇಲ್ಲ. ಮೋದಿಯವರ ಕಾರಣದಿಂದ ಏರಿಕೆಯಾಗಿದ್ದ ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ-ಕಾಳು, ಅಡುಗೆ ಎಣ್ಣೆ ಸೇರಿ ಎಲ್ಲದರ ಬೆಲೆ ಏರಿಕೆ ನೀತಿಯಿಂದ ಹೈರಾಣಾಗಿದ್ದ ರಾಜ್ಯದ ಜನರ ಬದುಕಿನ‌ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಿಂದ ರಾಜ್ಯದ ಪ್ರತಿ ಕುಟುಂಬಗಳಿಗೆ, ಪ್ರತಿ ತಿಂಗಳು 5 ರಿಂದ 6 ಸಾವಿರ ರೂಪಾಯಿ ಒದಗಿ ಬರುವಂತಹ ನೆರವಿನ ಕಾರ್ಯಕ್ರಮಗಳನ್ನು ನೀಡಿದ್ದೇವೆ ಎಂದು ತಮ್ಮ ಯೋಜನೆಗಳನ್ನು ಪ್ರಶಂಸಿಸಿಕೊಂಡರು.

ರಾಜ್ಯದ ಜನರಿಗೆ ಅನ್ನಭಾಗ್ಯದ ಅಕ್ಕಿ ಕೊಡದಂತೆ ಮೋದಿಯವರ ಕೇಂದ್ರ ಸರ್ಕಾರ ತೊಂದರೆ ಕೊಟ್ಟರೂ ಕೂಡ ನಾವು ಅಕ್ಕಿ ಜೊತೆಗೆ ಹಣವನ್ನೂ ನಮ್ಮ ಜನರ ಬದುಕಿಗೆ ಕೊಡುತ್ತಿದ್ದೇವೆ ಎಂದರು.

ಕೊಟ್ಟ ಮಾತಿನಂತೆ ನಡೆದುಕೊಂಡವರು ಯಾರು ಎನ್ನುವುದನ್ನು ನಿಮ್ಮ ಹೃದಯಕ್ಕೆ ಕೇಳಿಕೊಳ್ಳಿ. ಅವರಿಗೆ ಮಾತ್ರ ನಿಮ್ಮ ಮತ ನೀಡಿ. ರಾಜ್ಯದಲ್ಲಿ ಬಿಜೆಪಿಯಿಂದ ಗೆದ್ದ 27 ಸಂಸದರು ರಾಜ್ಯದ ಸಮಸ್ಯೆಗಳ ಬಗ್ಗೆ ನೆಪಕ್ಕೂ ಧ್ವನಿ ಎತ್ತದೇ ರಾಜ್ಯದ ಜನರಿಂದ ಪಡೆದ ಮತಕ್ಕೆ ಅವಮಾನ ಮಾಡಿದರು. ಈ ಅವಮಾನಕ್ಕೆ ತಕ್ಕ ಉತ್ತರ ನೀಡಿ ರಾಜ್ಯದ ಜನತೆಯ ಪರವಾಗಿ ಧ್ವನಿ ಎತ್ತುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಮಂಡ್ಯ ಜನತೆಯ ಸ್ವಾಭಿಮಾನಿ ತಾಕತ್ತನ್ನು ತೋರಿಸಿ ಎಂದು ಕರೆ ನೀಡಿದರು.

ಶ್ರೀರಾಮನವಮಿಯ ಶುಭಾಶಯ ಕೋರಿದ ಸಿಎಂ

ಇದೇ ಸಂದರ್ಭದಲ್ಲಿ ಮಂಡ್ಯದ ಜನತೆಗೆ ಮತ್ತು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಅವರು ರಾಮನವಮಿಯ ಶುಭಾಶಯವನ್ನು ಕೋರಿ ಎಲ್ಲರೂ ಭಕ್ತಿ ಶ್ರದ್ದೆ ಮತ್ತು ಸಂಭ್ರಮದಿಂದ ರಾಮನವಮಿ ಆಚರಿಸುವಂತೆ ಕೋರಿದರು.

ಭಾವನಾತ್ಮಕವಾಗಿ ಕೆರಳಿಸಿ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ

ಭಾರತೀಯರ ಭಾವನೆಗಳನ್ನು ಭಾವನಾತ್ಮಕವಾಗಿ ಕೆರಳಿಸಿ, ನಮ್ಮ ಬದುಕಿಗೆ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ. ಜನರ ಕಷ್ಟಗಳಿಗೆ ಸ್ಪಂದಿಸುವ ನಮಗೆ ಶಕ್ತಿ ಕೊಡಿ. ನೀವು ಕೊಟ್ಟ ಶಕ್ತಿ ನಿಮ್ಮ ಮನೆ ಬಾಗಿಲಿಗೆ ಉತ್ತಮ ಕಾರ್ಯಕ್ರಮಗಳ ರೂಪದಲ್ಲಿ ವಾಪಾಸ್ ಬರುತ್ತದೆ ಎಂದು ಘೋಷಿಸಿದರು.

ಈ ಸಂದರ್ಭದಲ್ಲಿ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಸೇರಿ ಮೈಸೂರು, ಮಂಡ್ಯ ಜಿಲ್ಲೆಯ ಶಾಸಕರುಗಳು, ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

13 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

15 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago