Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಅನಧಿಕೃತ ಮದ್ಯ ಸಾಗಾಣಿಕೆ ಬಗ್ಗೆ ನಿಗಾವಹಿಸಿ: ಚುನಾವಣಾ ವೆಚ್ಚ ವೀಕ್ಷಕರ ಸೂಚನೆ

ಮಂಡ್ಯ: ಅನಧಿಕೃತವಾಗಿ ಮದ್ಯ ಸಾಗಾಣಿಕೆ ಹಾಗೂ ಸಂಗ್ರಹಣೆಯ ಬಗ್ಗೆ ಚುನಾವಣಾ ತಂಡಗಳು ಹೆಚ್ಚಿನ ನಿಗಾ ವಹಿಸಬೇಕು. ಸೂಕ್ಷ್ಮ ಸ್ಥಳಗಳಲ್ಲಿರುವ ಮದ್ಯದ ಅಂಗಡಿಗಳನ್ನು ಪಟ್ಟಿ ಮಾಡಿಕೊಂಡು ಅಬಕಾರಿ ಇಲಾಖೆಯ ಅವರು ತೀವ್ರ ಗಮನ ಹರಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರುಗಳಾದ ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆದಾಯ ತೆರಿಗೆ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಬಟ್ಟೆ, ದಿನನಿತ್ಯ ಉಪಯೋಗಿಸುವ ಎಲೆಕ್ಟ್ರಾನಿಕ್ ಸರಕು ಹಾಗೂ ಇನ್ನಿತರೆ ವಸ್ತುಗಳನ್ನು ಸಂಗ್ರಹಿಸುವ ಗೋಡೌನ್ ಗಳಲ್ಲಿ ಪರಿಶೀಲನೆ ನಡೆಸಿ ಜೊತೆಗೆ ಗೋಡೌನ್ ಗಳಿಗೆ ಅನರೀಕ್ಷಿತ ದಾಳಿ ನಡೆಸಿ ಎಂದರು.

ಬ್ಯಾಂಕ್ ವಹಿವಾಟಿನ ಮೇಲೆ ನಿಗಾವಹಿಸಿ ಬ್ಯಾಂಕ್ ಖಾತೆಗಳಲ್ಲಿ ನಡೆಯುವ ಸಂಶಯಾಸ್ಪದ ವಹಿವಾಟು ಮತ್ತು ಹತ್ತು ಲಕ್ಷಕ್ಕಿಂತ ಹೆಚ್ಚಿನ ಹಣ ವರ್ಗಾವಣೆ, ಒಂದು ಖಾತೆಯಿಂದ 10ಕ್ಕಿಂತ ಹೆಚ್ಚಿನ ಖಾತೆಗೆ ಹಣ ವರ್ಗಾವಣೆ ಕುರಿತಂತೆ ಪ್ರತಿದಿನ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಕುಮಾರ ಅವರು ಕಡತಗಳು ಸೇರಿದಂತೆ ವಿವಿಧ ನಿರ್ವಹಣೆಯ ಬಗ್ಗೆ ರಾಜಕೀಯ ಪಕ್ಷಗಳಿಗೆ ಪ್ರಚಾರಕ್ಕಾಗಿ ಅನುಮತಿ ನೀಡಲು ತೆರೆದಿರುವ ಏಕಗವಾಕ್ಷಿ ಕೇಂದ್ರಗಳ ಬಗ್ಗೆ ವಿವರಿಸಿದರು. ಜೊತೆಗೆ ಬ್ಯಾಂಕ್ ವಹಿವಾಟಿನ ಮೇಲೆ ನಿಗಾ ವಹಿಸಲು 10 ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಪ್ರತಿದಿನ ನಿಯಮಿತವಾಗಿ ವರದಿ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಸಭೆಯ ನಂತರ ವೆಚ್ಚ ವೀಕ್ಷಕರು ಚುನಾವಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ‌ ಸ್ಥಾಪಿತವಾಗಿರುವ ಕಂಟ್ರೋಲ್ ರೂಂ ಹಾಗೂ ಮಾಧ್ಯಮ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್ ಎಲ್ ನಾಗರಾಜು, ಆದಾಯ ತೆರಿಗೆ ಇಲಾಖೆ ಅಧಿಕಾರಿ ಮಹಮ್ಮದ್ ಇದಾಯತ್ ಉಸೇಸ್, ಅಬಕಾರಿ ಇಲಾಖೆ ಜಿಲ್ಲಾ ಅಧಿಕಾರಿ ರಾಘವೇಂದ್ರ, ವಾಣಿಜ್ಯ ತೆರಿಗೆ ಅಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags: