ಮಂಡ್ಯ

ಕಾರು, ಲಾರಿ ನಡುವೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ

ಮಂಡ್ಯ: ವೇಗವಾಗಿ ಬರುತ್ತಿದ್ದ ಕಾರಿಗೆ ಎದುರಾಗಿ ಬಂದ ಲಾರಿಯೊಂದು ಗುದ್ದಿದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.

ಗುರುವಾರ (ಜುಲೈ. 11) ನಾಗಮಂಗಲ-ಪಾಂಡವಪುರ ಹೆದ್ದಾರಿ ಹಾದುಹೋಗುವ ಶ್ರೀ ರಾಮನಹಳ್ಳಿ ಬಳಿ ನಡದ ರಸ್ತೆ ಅಪಘಾತದಲ್ಲಿ ಚಿತ್ರದುರ್ಗ ಮೂಲದ ಯುವರಾಜ್‌, ತಿಪ್ಪೇಸ್ವಾಮಿ ಹಾಗೂ ಸಿದ್ದೇಶ್‌ ಮರಣ ಹೊಂದಿದ್ದಾರೆ.

ವೇಗವಾಗಿ ಬರುತ್ತಿದ್ದ ಕಾರಿಗೆ ಎದುರಾಗಿ ಬಂದ ಲಾರಿ ಡಿಕ್ಕೆ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಿಂದ ದೂರಕ್ಕೆ ಸರಿದು ಕಂಬಕ್ಕೆ ಡಿಕ್ಕೆ ಹೊಡೆದಿದೆ. ಪರಿಣಾಮವಾಗಿ ಮೂರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ದೇಹಗಳನ್ನು ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ನಾಗಮಂಗಲ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

6 hours ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

7 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್‌ ವಿರುದ್ಧ ಇನ್ನೊಂದು ಪ್ರಕರಣ ದಾಖಲು

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…

11 hours ago

ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಪೊಳ್ದ್ ಆಚರಣೆ

ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…

11 hours ago

ಸೆ.21 ರಿಂದ ಮೂರು ದಿನ ವಿಧಾನಮಂಡಲದ ವಿಶೇಷ ಅಧಿವೇಶನ

ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…

12 hours ago

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

13 hours ago