ಮದ್ದೂರು : ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಈ ಘಟನೆ ಜರುಗಿದ್ದು, ಯುವತಿಯ ತಂದೆ ಚನ್ನೇಗೌಡನಿ ಅವರಿಗೂ ಸಣ್ಣ ಪುಟ್ಟ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುಂಚಗಹಳ್ಳಿ ಗ್ರಾಮದ ವಿನೋದ್ ಎಂಬ ಯುವಕ ಪಕ್ಕದ ಮನೆಯ ಯುವತಿ ಕಾವ್ಯ ಎಂಬ ಯುವತಿಯನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಕಳೆದ ಗುರುವಾರ ಯುವತಿಯ ಮನೆಯವರ ವಿರೋಧದ ನಡುವೆಯೂ ಇಬ್ಬರೂ ವಿವಾಹವಾಗಿದ್ದಾರೆ.
ಈ ಘಟನೆಯಿಂದ ಕುಪಿತಗೊಂಡಿದ್ದ ಯುವತಿಯ ತಂದೆ ಚನ್ನೇಗೌಡ ಶನಿವಾರ ಬೆಳಿಗ್ಗೆ ಯುವಕನ ಮನೆಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಯುವಕನ ಮನೆಯಲ್ಲಿ ಯಾರೂ ಇಲ್ಲದ ಕಾರಣದಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ತಕ್ಷಣವೇ ಅಕ್ಕ ಪಕ್ಕದ ಮನೆಯವರು ಬೆಂಕಿ ನಂದಿಸಲು ಪ್ರಯತ್ನಿಸಿದರು. ಸ್ಥಳಕ್ಕೆ ಮದ್ದೂರು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸುವಷ್ಟರಲ್ಲಿ ಮನೆಯಲ್ಲಿದ್ದ ಪೀಠೋಪಕರಣ, ಎಲೆಕ್ಟ್ರಾನಿಕ್ ವಸ್ತುಗಳು, ಬಟ್ಟೆ, ಅಡುಗೆ ಸಾಮಗ್ರಿ ಸೇರಿದಂತೆ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಸ್ಥಳಕ್ಕೆ ಮದ್ದೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನವೀನ್ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…