ಮಂಡ್ಯ

ಕೆಆರ್‌ಎಸ್‌ ಬೃಂದಾವನದಲ್ಲಿ ಹುಚ್ಚು ನಾಯಿ ದಾಳಿ : ಪ್ರವಾಸಿಗರಿಗೆ ಗಾಯ

ಮಂಡ್ಯ : ಕೆಆರ್‌ಎಸ್‌ ಉತ್ತರ ಬೃಂದಾವನದಲ್ಲಿ ಹುಚ್ಚು ನಾಯಿ ದಾಳಿ ನಡೆಸಿ ಐದು ಮಂದಿ ಪ್ರವಾಸಿಗರು ಗಾಯಗೊಂಡಿರುವ ಘಟನೆ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್‌ಎಸ್‌ ಬೃಂದಾವನಕ್ಕೆ ಪ್ರವಾಸಿಗರು ಆಗಮಿಸಿದ್ದರು. ಉತ್ತರ ಬೃಂದಾವನದಲ್ಲಿ ಕಳೆದ ರಾತ್ರಿ ಹುಚ್ಚು ನಾಯಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ ಪ್ರವಾಸಿಗರ ಮೇಲೆ ದಾಳಿ ನಡೆಸಿದೆ.

ನಾಯಿ ದಾಳಿಯಿಂದ ಐವರು ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಹುಚ್ಚು ನಾಯಿಯನ್ನು ಸ್ಥಳದಿಂದ ಓಡಿಸಿದ್ದಾರೆ. ಘಟನೆಯಿಂದ ಪ್ರವಾಸಿಗರಲ್ಲಿ ಆತಂಕ ಮನೆ ಮಾಡಿದೆ.

ಮತ್ತೆ ಹುಚ್ಚು ನಾಯಿ ಬರಬಹುದೆಂಬ ಎಚ್ಚರಿಕೆಯಿಂದ ಉತ್ತರ ಬೃಂದಾವನವನ್ನು ಬಂದ್‌ ಮಾಡಲಾಗಿದೆ. ನಾಯಿ ದಾಳಿಯಿಂದ ಗಾಯಗೊಂಡವರಿಗೆ ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

lokesh

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 mins ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago