Mysore
18
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಮದ್ದೂರು | 21 ಅನ್ಯಕೋಮಿನ ಕಿಡಿಕೇಡಿಗಳ ಬಂಧನ, ಇಲ್ಲಿದೆ ಬಂಧಿತರ ಪಟ್ಟಿ

ಮಂಡ್ಯ : ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ಸಂಜೆ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ. ಪೂರ್ವ ನಿಯೋಜನೆ ಮಾಡಿಯೇ ಗಣೇಶ ಮೆರವಣಿಗೆ ಮಸೀದಿ ಬಳಿ ಬರುತ್ತಿದ್ದಂತೆಯೇ ಕಲ್ಲು ತೂರಾಟ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ.

ಇನ್ನೊಂದೆಡೆ ಸ್ವತಃ ಗೃಹ ಸಚಿವ ಪರಮೇಶ್ವರ್ ಸಹ ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಹೇಳಿದ್ದಾರೆ. ಈ ಸಂಬಂಧ ಕಲ್ಲು ತೂರಿದ್ದ 21 ಮುಸ್ಲಿಮರನ್ನು ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿಗಳ ವಿರುದ್ಧ BNS ಕಾಯ್ದೆ 189(2), 189(4), 121(2), 132ರ ಹಾಗೂ 190ರ ಅಡಿ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಂಧಿತ ಆರೋಪಿಗಳು ಇವರು…..
ಮೊಹಮ್ಮದ್​ ಆವೇಜ್ ಅಲಿಯಾಸ್ ಮುಳ್ಳು, ಮೊಹಮ್ಮದ್ ಇರ್ಫಾನ್ ಅಲಿಯಾಸ್ ಮಿಯಾ, ನವಾಜ್ ಖಾನ್ ಅಲಿಯಾಸ್ ನವಾಜ್, ಇಮ್ರಾನ್ ಪಾಷಾ ಅಲಿಯಾಸ್ ಇಮ್ರಾನ್, ಉಮರ್ ಫಾರೂಕ್ ಅಲಿಯಾಸ್ ಉಮರ್, ಸಯ್ಯದ್ ದಸ್ತಗಿರ್ ಅಲಿಯಾಸ್ ಸಯ್ಯದ್ ರಶೀದ್ , ಖಾಸಿಫ್ ಅಹ್ಮದ್​ ಅಲಿಯಾಸ್ ಖಾಸಿಫ್, ಅಹ್ಮದ್​ ಸಲ್ಮಾನ್ ಅಲಿಯಾಸ್ ಮುಕ್ಕುಲ್ಲಾ, ಮುಸವೀರ್ ಪಾಷಾ ಅಲಿಯಾಸ್ ಒಡೆಯ, ಕಲಾಂದರ್ ಖಾನ್, ಸುಮೇರ್ ಪಾಷಾ, ಮೊಹಮ್ಮದ್ ಅಜೀಜ್, ಇನಾಯತ್ ಪಾಷಾ, ಮೊಹಮ್ಮದ್ ಖಲೀಂ ಅಲಿಯಾಸ್ ಕೈಫ್ ಬಂಧಿತರು.

ಮಸೀದಿ ಮುಂದೆಯೇ ಮೆರವಣಿಗೆ ಮೇಲೆ ಕಲ್ಲು
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಗಣೇಶನನ್ನ ಕೂರಿಸಲಾಗಿತ್ತು. ನಿನ್ನೆ (ಸೆಪ್ಟೆಂಬರ್ 08) 11ನೇ ದಿನವಾಗಿದ್ದರಿಂದ ಸಂಜೆಯಿಂದ ಗಣೇಶ ವಿಸರ್ಜನಾ ಮೆರವಣಿಗೆಯನ್ನ ಹಮ್ಮಿಕೊಳ್ಳಲಾಗಿತ್ತು. ಹೀಗೆ ಗಣೇಶ ವಿಸರ್ಜನಾ ಮೆರವಣಿಗೆ ಮುಂದೆ ಸಾಗಿ ಬರ್ತಿದ್ದಂತೆ ಮಸೀದಿ ಮುಂದೆ ಇದ್ದಕ್ಕಿದ್ದಂತೆ ಕಲ್ಲು ತೂರಾಟ ನಡೆದಿದೆ. ಕಿಡಿಗೇಡಿಗಳು ಗಣೇಶನ ಮೆರವಣಿಗೆ ಮೇಲೆ ಕಲ್ಲು ತೂರಿ ನೀಚತನ ತೋರಿದ್ದಾರೆ. ಇದನ್ನ ಕಂಡ ಗಣೇಶ ಪ್ರತಿಷ್ಠಾಪಿಸಿದ ಯುವಕರು ಆಕ್ರೋಶಗೊಂಡಿದ್ದು, ಎರಡು ಗುಂಪಗಳ ನಡುವೆ ಗಲಾಟೆ ಜೋರಾಗಿದೆ. ಆ ವೇಳೆ ವಾತಾವರಣ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಫುಲ್ ಅಲರ್ಟ್ ಆಗಿದ್ದು, ಎರಡು ಗುಂಪನ್ನು ತಕ್ಷಣವೇ ಚದುರಿಸಿ ಓಡಿಸಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Tags:
error: Content is protected !!