ಮಂಡ್ಯ

ಮದ್ದೂರು | ಸಾರಿಗೆ ಬಸ್‌-ಕಾರಿನ ನಡುವೆ ಅಪಘಾತ ; ಓರ್ವ ಸಾವು, 16ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಂಡ್ಯ : ಸಾರಿಗೆ ಬಸ್‌ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, 16ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನಲ್ಲಿ ಮಾಚಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಅಪಘಾತದಲ್ಲಿ ಕಾರು ಚಾಲಕನಾದ ಬೆಂಗಳೂರಿನ ರಾಜರಾಜೇಶ್ವರನಗರದ ಧನರಾಜ್‌ ಎಂಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಬಸ್ಸಿನಲ್ಲಿದ್ದ 16 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಘಟನೆ ವಿವರ…
ಚನ್ನಪಟ್ಟಣದ ಚಾಮುಂಡೇಶ್ವರಿ ದೇವಾಲಯದಿಂದ ಮದ್ದೂರಿಗೆ ಬರ್ತಿದ್ದ ನೂರಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್‌ ಮಾಚಹಳ್ಳಿ ಸಮೀಪಕ್ಕೆ ಬರುತ್ತಿದ್ದಂತೆ ಮದ್ದೂರಿನಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗೊಂಡಿದ್ದಾರೆ.

ಇದನ್ನು ಓದಿ: ಅಪಘಾತ : ಗಾಯಾಳುಗಳ ಆರೋಗ್ಯ ವಿಚಾರಿಸಿದ ಡಿಸಿ

ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆ ಹಾಗೂ ಮದ್ದೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಿಸಲಾಗಿದೆ.

ಸ್ಥಳಕ್ಕೆ ಕೆಸ್ತೂರು ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿ ಈ ಸಂಬಂಧ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಪರದಾಡಿದ ಗಾಯಾಳುಗಳು ; ಸ್ಥಳೀಯರ ಪ್ರತಿಭಟನೆ
ಅಪಘಾತ ಸಂಭವಿಸಿ ಒಂದು ಗಂಟೆಯಾದರೂ ಸ್ಥಳಕ್ಕೆ ಅಂಬ್ಯುಲೆನ್ಸ್‌ ಬರದ ಕಾರಣ ಗಾಯಾಳುಗಳು ಪರದಾಡಬೇಕಾಯಿತು ಎಂದು ಸ್ಥಳೀಯರು ದೂರಿದ್ದಾರೆ. ನಾವು ಸಮಯಕ್ಕೆ ಆಂಬ್ಯುಲೆನ್ಸ್‌ಗೆ ಕರೆ ಮಾಡಿದರು ಆಂಬ್ಯುಲೆನ್ಸ್‌ ಬರಲಿಲ್ಲ, ಪರಿಣಾಮ ದಾರಿಯಲ್ಲಿ ಹೋಗುವ ವಾಹನಗಳನ್ನು ಅಡ್ಡಗಟ್ಟಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿದೆವು. ನಂತರ ಒಂದು ಗಂಟೆಯ ಬಳಿಕ ಆಂಬ್ಯುಲೆನ್ಸ್‌ ಆಗಮಿಸಿತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago