ಮದ್ದೂರು: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ದೂರು ಪ್ರವಾಸ ಹಮ್ಮಿಕೊಂಡಿದ್ದ ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಮಂಡ್ಯ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದು, BNSS ಕಾಯ್ದೆ 163ರ ಅಡಿ ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಪ್ರವೇಶಾವಕಾಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಹಿಂದೂ ಧರ್ಮದ ಪ್ರಬಲ ಪ್ರತಿಪಾದಕರಾಗಿ, ಪ್ರಚೋದನಾಕಾರಿ, ಕೋಮು ವೈಷಮ್ಯ ಬಿತ್ತುವ, ಪ್ರಚೋದನಾಕಾರಿ ಭಾಷಣ ಮಾಡುವ ಪ್ರವೃತ್ತಿ ಪ್ರಮೋದ್ ಮುತಾಲಿಕ್‌ಗೆ ಇದೆ. ಮುತಾಲಿಕ್ ವಿರುದ್ಧ ರಾಜ್ಯಾದ್ಯಂತ 30ಕ್ಕೂ ಹೆಚ್ಚು ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದನ್ನು ತಪ್ಪಿಸುವ ಕಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.





