Mysore
18
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಮದ್ದೂರು ಬಂದ್‌ ಬಹುತೇಕ ಯಶಸ್ವಿ: ನಾಳೆವರೆಗೂ ನಿಷೇಧಾಜ್ಞೆ ಜಾರಿ

ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಅನ್ಯಕೋಮಿನವರಿಂದ ಕಲ್ಲು ತೂರಾಟ ನಡೆದಿರುವುದನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದ ಮದ್ದೂರು ಬಂದ್ ಬಹತೇಕ ಯಶಸ್ವಿಯಾಗಿದ್ದರೂ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ.

ಬೆಳಗ್ಗಿನಿಂದಲೇ ಪಟ್ಟಣದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ತಬ್ದಗೊಂಡಿದ್ದವು. ಪ್ರತಿದಿನ ಬಸ್, ಅಟೋ, ಜನಜಂಗಳಿಯಿಂದ ಗಿಜಿಗುಡುತ್ತಿದ್ದ ಪಟ್ಟಣದಲ್ಲಿ ಒಂದು ರೀತಿ ನೀರವ ಮೌನ ಅವರಿಸಿತ್ತು. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಬಂದ್‍ಗೆ ಬೆಂಬಲ ಕೊಟ್ಟಿದ್ದರು. ಪರಿಸ್ಥಿತಿ ಶಾಂತವಾಗಿದ್ದರೂ ಸಹ ಮದ್ದೂರು ಪಟ್ಟಣದಲ್ಲಿಂದು ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ.

ಹಿಂದೂಪರ ಸಂಘಟನೆಗಳ ಪ್ರತಿಭಟನೆಗೆ ಬಿಜೆಪಿ ಸಾಥ್ ನೀಡಿತ್ತು. ಮದ್ದೂರಿನ ಕೆಎಂ ದೊಡ್ಡಿ, ಬೆಸಗರಹಳ್ಳಿ, ಕೆಸ್ತೂರು ಸೇರಿದಂತೆ ಹೋಬಳಿ ಕೇಂದ್ರಗಳು ಸಹ ಬಂದ್ ಆಗಿದ್ದವು. ಸಾವಿರಾರು ಜನ ಹಿಂದೂ ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗಿಯಾಗಿ ಪಟ್ಟಣದ ಪೇಟೆ ಬೀದಿ ಮೂಲಕ ಐಬಿ ವೃತ್ತದವರೆಗೂ ರ್ಯಾಲಿ ನಡೆಸಿದರು.

ಮದ್ದೂರಿನ ರಾಮ್‍ರಹೀಮ್ ನಗರದಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಾಗ ಉಂಟಾದ ಘರ್ಷಣೆಗೆ ಸಂಬಂಧಿಸಿದಂತೆ ಎರಡು ಎಫ್‍ಐಆರ್ ದಾಖಲಿಸಲಾಗಿದೆ. ಪೊಲೀಸರು ತಮ್ಮದೇ ಆದ ಪ್ರಕರಣವನ್ನು ದಾಖಲಿಸಿಕೊಂಡರೆ, ಗಾಯಾಳುಗಳು ನೀಡಿದ ದೂರಿನ ಆಧಾರದ ಮೇಲೆ ಮತ್ತೊಂದು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಭಾನುವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 22 ಜನರನ್ನು ಬಂಧಿಸಲಾಗಿದೆ.

ಮಸೀದಿಯಿಂದ ಸುಮಾರು 500 ಮೀಟರ್ ದೂರದಲ್ಲಿ ಆರಂಭವಾದ ಕಲ್ಲು ತೂರಾಟವು ಮೆರವಣಿಗೆಯಲ್ಲಿದ್ದ ಸದಸ್ಯರಿಂದ ಪ್ರತೀಕಾರಕ್ಕೆ ಕಾರಣವಾಯಿತು. ಎರಡು ಗುಂಪುಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ನಂತರ ಹಿಂದೂ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿ, ಟೈರ್‌ಗಳನ್ನು ಸುಟ್ಟು, ಕೇಸರಿ ಧ್ವಜಗಳನ್ನು ಬೀಸುತ್ತಾ ಪ್ರತಿಭಟನೆ ನಡೆಸಿದರು.

Tags:
error: Content is protected !!