ಮದ್ದೂರು : ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ತಾಲ್ಲೂಕಿನ ತಗ್ಗಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸಚಿನ್ ಎಂಬುವರೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಚಿಕ್ಕೋನಹಳ್ಳಿ ಗ್ರಾಮದ ಶಿವಲಿಂಗಯ್ಯ ಅವರ ಬಳಿ ಪಿಡಿಒ ಸಚಿನ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಶಿವಲಿಂಗಯ್ಯ ದೂರು ನೀಡಿದ್ದರು.
ಇದನ್ನೂ ಓದಿ:-ಗಾಜಾ ಯುದ್ಧ ಕೊನೆಗೊಂಡಿದೆ : ಟ್ರಂಪ್
ಸೋಮವಾರ ಶಿವಲಿಂಗಯ್ಯ ಅವರಿಂದ ಪಿಡಿಒ ಸಚಿನ್ ೫ ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗಳಾದ ಕುಮಾರ್ ಹಾಗೂ ಬ್ಯಾಟರಾಯಗೌಡ ಅವರು ಕಾರ್ಯಾಚರಣೆ ನಡೆಸಿ, ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.





