ಮದ್ದೂರು: ತಾಲೂಕಿನ ಮಣಿಗೆರೆ ಬಳಿ ಕಾರು ಹಾಗೂ ಗೊಡ್ಸ್ ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ 28 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಗಾಯಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಮದ್ದೂರು ಕ್ಷೇತ್ರದ ಶಾಸಕ ಉದಯ್ ಸೇರಿದಂತೆ ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಆಸ್ಪತ್ರೆಗೆ ತೆರಳಿ ಗಾಯಳುಗಳ ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆ ಅಪಘಾತದಲ್ಲಿ ಎಲ್ಲರಿಗೂ ಗಾಯವಾಗಿದೆ. ಯಾವುದೇ ಪ್ರಣಾಪಾಯವಾಗಿಲ್ಲ. ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಎಲ್ಲರಿಗೂ ಚಿಕಿತ್ಸೆಯ ವೆಚ್ಚ ಭರಿಸಲಾಗುತ್ತದೆ. ಗೂಡ್ಸ್ ಗಾಡಿಯಲ್ಲಿ ಹೆಚ್ಚು ಜನರಿದ್ದ ಕಾರಣ ಗಾಯಗಳು ಆಗಿವೆ. ಗೂಡ್ಸ್‌ಗಳಲ್ಲಿ ಜನರನ್ನು ಸಾಗಿಸುವುದು ತಪ್ಪು. ಇದರ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಶಾಸಕ ಉದಯ್ ಹೇಳಿದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…