ಬೆಂಗಳೂರು : ಕರ್ತವ್ಯ ಲೋಪದ ಆರೋಪದ ಮೇಲೆ ಮದ್ದೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ಭಾನುವಾರ ರಾತ್ರಿ ಮದ್ದೂರು ನಗರದ ಚೆನ್ನೇಗೌಡನ ದೊಡ್ಡಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ರಾಮ್ ರಹೀಂ ನಗರದ ಮಸೀದಿ ಮುಂದೆ ಮೂರ್ತಿ ಸಾಗುತ್ತಿದ್ದಾಗ ಲೈಟ್ ಆಫ್ ಮಾಡಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು.
ಇದನ್ನು ಓದಿ: ಮದ್ದೂರು | ಸಾಮೂಹಿಕ ಗಣಪತಿ ವಿಸರ್ಜನಾ ಮಹೋತ್ಸವ; ಬಿಜೆಪಿ-ಜೆಡಿಎಸ್ ನಾಯಕರು ಭಾಗಿ
ಈ ಹಿನ್ನೆಲೆಯಲ್ಲಿ ಸಂಘರ್ಷ ಉಂಟಾಗಿದ್ದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮಾರನೇ ದಿನ ಅಂದಿನ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಸಾವಿರಾರು ಮಂದಿ ಜಮಾಯಿಸಿದ್ದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸರು ಗುಂಪನ್ನು ಚದುರಿಸಲು ಲಾಠಿಪ್ರಹಾರ ನಡೆಸಿದರು. ಆ ವೇಳೆ ಆರೇಳು ಮಂದಿ ಗಾಯಗೊಂಡರು. ಮಂಗಳವಾರ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹಾಗೂ ಸಹಸ್ರಾರು ಮಂದಿ ಪಾಲ್ಗೊಂಡು ಸಾಮೂಹಿಕ ಗಣೇಶ ಮೂರ್ತಿಗಳನ್ನು ವಿಸರ್ಜಿಸಿದ್ದಾರೆ.
ಮದ್ದೂರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಇದೀಗ ಇನ್ಸ್‌ಪೆಕ್ಟರ್ ಅಮಾನತು ಮಾಡಿದೆ. ಈ ನಡುವೆಯೇ ಮಂಡ್ಯ ಜಿಲ್ಲಾ ಅಡಿಷನಲ್ ಎಸ್ಪಿ ತಿಮಯ್ಯ ಅವರನ್ನೂ ಸಹ ಸರ್ಕಾರ ವರ್ಗಾವಣೆ ಮಾಡಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…