ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಲೆ ಕಲ್ಲು ತೂರಾಟ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಇಂದು ಮದ್ದೂರು ಬಂದ್‌ಗೆ ಕರೆ ನೀಡಲಾಗಿದೆ.
ಹಿಂದೂಪರ ಸಂಘಟನೆಗಳು ಮದ್ದೂರು ಬಂದ್‌ಗೆ ಕರೆ ನೀಡಿದ್ದು, ಪಟ್ಟಣದಾದ್ಯಂತ ಸ್ವಯಂ ಪ್ರೇರಿತವಾಗಿ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪಟ್ಟಣದಾದ್ಯಂತ ನಾಳೆವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮದ್ದೂರು ಬಂದ್ ಬೆನ್ನಲ್ಲೇ ಪಟ್ಟಣದಾದ್ಯಂತ 1500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ರೌಂಡ್ಸ್ ನಡೆಸಲಾಗುತ್ತಿದೆ. ನಾಲ್ವರು ಹೆಚ್ಚುವರಿ ಎಸ್‌ಪಿಗಳನ್ನು, 15 ಡಿವೈಎಸ್‌ಪಿ, 35 ಇನ್ಸ್‌ಪೆಕ್ಟರ್‌ಗಳು, 80 ಪಿಎಸ್‌ಐಗಳು, 10 ಡಿಎಆರ್ ತುಕಡಿ, 15 ಕೆಎಸ್‌ಆರ್‌ಪಿ ಸೇರಿ 800ಕ್ಕೂ ಹೆಚ್ಚು ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಪಟ್ಟಣದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.





