ಮಂಡ್ಯ

ಮದ್ದೂರು ಸಂಪೂರ್ಣ ಬಂದ್:‌ ಎಲ್ಲೆಡೆ ಪೊಲೀಸರ ನಿಯೋಜನೆ

ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಲೆ ಕಲ್ಲು ತೂರಾಟ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವುದನ್ನು ಖಂಡಿಸಿ ಇಂದು ಮದ್ದೂರು ಬಂದ್‌ಗೆ ಕರೆ ನೀಡಲಾಗಿದೆ.

ಹಿಂದೂಪರ ಸಂಘಟನೆಗಳು ಮದ್ದೂರು ಬಂದ್‌ಗೆ ಕರೆ ನೀಡಿದ್ದು, ಪಟ್ಟಣದಾದ್ಯಂತ ಸ್ವಯಂ ಪ್ರೇರಿತವಾಗಿ ಅಂಗಡಿ, ಮುಂಗಟ್ಟುಗಳನ್ನು ಬಂದ್‌ ಮಾಡಲಾಗಿದೆ. ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪಟ್ಟಣದಾದ್ಯಂತ ನಾಳೆವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮದ್ದೂರು ಬಂದ್‌ ಬೆನ್ನಲ್ಲೇ ಪಟ್ಟಣದಾದ್ಯಂತ 1500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ರೌಂಡ್ಸ್‌ ನಡೆಸಲಾಗುತ್ತಿದೆ. ನಾಲ್ವರು ಹೆಚ್ಚುವರಿ ಎಸ್‌ಪಿಗಳನ್ನು, 15 ಡಿವೈಎಸ್‌ಪಿ, 35 ಇನ್ಸ್‌ಪೆಕ್ಟರ್‌ಗಳು, 80 ಪಿಎಸ್‌ಐಗಳು, 10 ಡಿಎಆರ್‌ ತುಕಡಿ, 15 ಕೆಎಸ್‌ಆರ್‌ಪಿ ಸೇರಿ 800ಕ್ಕೂ ಹೆಚ್ಚು ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಪಟ್ಟಣದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

16 mins ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

20 mins ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

5 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

5 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

5 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

5 hours ago