Mysore
23
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಮದ್ದೂರು: ಹೈಕೋರ್ಟ್‌ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

ಮದ್ದೂರು: ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಸುನಿಲ್‌ ದತ್‌ ಯಾದವ್‌ ಅವರು ಮದ್ದೂರಿಗೆ ಭೇಟಿ ನೀಡಿ ಮದ್ದೂರು ನ್ಯಾಯಾಲಯಕ್ಕೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಮದ್ದೂರಿನ ನ್ಯಾಯಾಲಯಕ್ಕೆ ಸಂಬಂಧಪಟ್ಟಂತೆ ಮದ್ದೂರು ನಗರದ ಸರ್ವೆ ನಂಬರ್‌ 800/1, 800/3, 800/1 ರೇಷ್ಮೆ ಇಲಾಖೆಯ ವ್ಯಾಪ್ತಿಗೆ ಬರುವ 4.35 ಎಕರೆ ಜಾಗವನ್ನು ಗುರುತಿಸಿ ನ್ಯಾಯಾಲಯ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸದರಿ ಸ್ಥಳವನ್ನು ಹಸ್ತಾಂತರಿಸಲಾಗಿದೆ.

ಸದರಿ ಜಾಗದಲ್ಲಿ 21 ಕೋಟಿ ರೂ ವೆಚ್ಚದಲ್ಲಿ ನ್ಯಾಯಾಲಯ ಸಂಕೀರ್ಣ ಮತ್ತು ನ್ಯಾಯಾಧೀಶರ ವಸತಿ ಗೃಹಗಳ ನಿರ್ಮಾಣ ಕಾಮಗಾರಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಸುನಿಲ್‌ ದತ್‌ ಯಾದವರ ಅವರು ಭೇಟಿ ನೀಡಿ ಕಟ್ಟಡದ ವಿನ್ಯಾಸ ಮತ್ತು ಉಳಿಕೆ ಕಾಮಗಾರಿಗಳ ವೀಕ್ಷಣೆ ಹಾಗೂ ಪಾರ್ಕಿಂಗ್‌ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು.

Tags:
error: Content is protected !!