ಮದ್ದೂರು: ಹೈಕೋರ್ಟ್ ನ್ಯಾಯಮೂರ್ತಿಗಳಾದ ಸುನಿಲ್ ದತ್ ಯಾದವ್ ಅವರು ಮದ್ದೂರಿಗೆ ಭೇಟಿ ನೀಡಿ ಮದ್ದೂರು ನ್ಯಾಯಾಲಯಕ್ಕೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಮದ್ದೂರಿನ ನ್ಯಾಯಾಲಯಕ್ಕೆ ಸಂಬಂಧಪಟ್ಟಂತೆ ಮದ್ದೂರು ನಗರದ ಸರ್ವೆ ನಂಬರ್ 800/1, 800/3, 800/1 ರೇಷ್ಮೆ ಇಲಾಖೆಯ ವ್ಯಾಪ್ತಿಗೆ ಬರುವ 4.35 ಎಕರೆ ಜಾಗವನ್ನು ಗುರುತಿಸಿ ನ್ಯಾಯಾಲಯ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸದರಿ ಸ್ಥಳವನ್ನು ಹಸ್ತಾಂತರಿಸಲಾಗಿದೆ.
ಸದರಿ ಜಾಗದಲ್ಲಿ 21 ಕೋಟಿ ರೂ ವೆಚ್ಚದಲ್ಲಿ ನ್ಯಾಯಾಲಯ ಸಂಕೀರ್ಣ ಮತ್ತು ನ್ಯಾಯಾಧೀಶರ ವಸತಿ ಗೃಹಗಳ ನಿರ್ಮಾಣ ಕಾಮಗಾರಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಸುನಿಲ್ ದತ್ ಯಾದವರ ಅವರು ಭೇಟಿ ನೀಡಿ ಕಟ್ಟಡದ ವಿನ್ಯಾಸ ಮತ್ತು ಉಳಿಕೆ ಕಾಮಗಾರಿಗಳ ವೀಕ್ಷಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು.
ಹನೂರು : ಗ್ರಾಮದ ಮುಖ್ಯ ರಸ್ತೆಯ ಸಮೀಪದಲ್ಲಿರುವ ಮಧ್ಯದ ಅಂಗಡಿಗಳನ್ನ ಸ್ಥಳಾಂತರಗೊಳಿಸಬೇಕೆಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು, ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ…
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ತೀವ್ರವಾಗಿ ಕುಸಿತ ಕಂಡಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಮೋಡ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ವಾರ್ಷಿಕ…
ಮೈಸೂರು: ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆಗೆ ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿ…
ಮೈಸೂರು: ಮುಂದಿನ 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮೈಸೂರು ಜಿಲ್ಲಾ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನವಾದ…